ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಹಾಗೂ ಸಹೋದರ ಡಿ.ಕೆ.ಸುರೇಶ್ (D.K.Suresh) ಅವರಿಗೆ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ (National Herald Case) ಸಂಬಂಧಿಸಿದಂತೆ ಆರ್ಥಿಕ ಅಪರಾಧ ವಿಭಾಗದಿಂದ ನೋಟಿಸ್ ನೀಡಲಾಗಿದೆ. ಪ್ರಕರಣದ ತನಿಖೆಯ ಭಾಗವಾಗಿ ವಿವರವಾದ ಹಣಕಾಸು ಮತ್ತು ವಹಿವಾಟು ಮಾಹಿತಿಯನ್ನು ಕೋರಿ ನೋಟಿಸ್ ಕೊಟ್ಟಿದ್ದಾರೆ. ಇದನ್ನೂ ಓದಿ: ಡಿಕೆ ಬ್ರದರ್ಸ್ ಬುಡಕ್ಕೆ ಬಂತು ನ್ಯಾಷನಲ್ ಹೆರಾಲ್ಡ್ ಕೇಸ್
ನ.29 ರಂದು ನೋಟಿಸ್ ನೀಡಿರುವ ಪೊಲೀಸರು, ಡಿ.19 ರೊಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ಅಥವಾ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಸೂಚನೆ ನೀಡಿದ್ದಾರೆ.
ಡಿ.ಕೆ.ಸುರೇಶ್ ಅವರಿಗೂ ನೋಟಿಸ್ ನೀಡಿರುವ ದೆಹಲಿ ಪೊಲೀಸರು, ಎಷ್ಟು ದುಡ್ಡು ನೀಡಿದ್ದೀರಿ, ಯಾವ ಉದ್ದೇಶಕ್ಕೆ ಬಳಕೆಯಾಗಿದೆ, ಹಣವನ್ನು ನೀಡಿದ್ದು ಹೇಗೆ, ಎಷ್ಟು ಹಣ ನೀಡಿದ್ದೀರಿ ಎಂಬ ಪ್ರಶ್ನೆಗಳಿಗೆ ವಿವರ ಕೇಳಿದ್ದಾರೆ. ಇದನ್ನೂ ಓದಿ: ಖರ್ಗೆ ಸಮ್ಮುಖದಲ್ಲಿ ನ್ಯಾಷನಲ್ ಹೆರಾಲ್ಡ್ ಕಚೇರಿ ಶೋಧ: ಅಧಿವೇಶನದ ಮಧ್ಯೆ ಸಮನ್ಸ್ ಜಾರಿಗೆ ಕಾಂಗ್ರೆಸ್ ಕಿಡಿ

