ನವದೆಹಲಿ: ಬೆಂಗಳೂರಿನ ಜನಪ್ರಿಯ ಕೆಫೆಯೊಂದರಲ್ಲಿ (Bengaluru Cafe) ಶುಕ್ರವಾರ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣವು ದೇಶಾದ್ಯಂತ ಆತಂಕ ಮೂಡಿಸಿದೆ. ಪ್ರಕರಣ ಭಯೋತ್ಪಾದಕ ಚಟುವಟಿಕೆಯ ಅನುಮಾನ ಹುಟ್ಟುಹಾಕಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲೂ ಪೊಲೀಸರು (Delhi Police) ಹೈ ಅಲರ್ಟ್ ಆಗಿದ್ದಾರೆ.
ದೆಹಲಿಯಲ್ಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ಜನನಿಬಿಡ ಪ್ರದೇಶಗಳಲ್ಲಿ, ವಿಶೇಷವಾಗಿ ದೆಹಲಿಯ ಮಾರುಕಟ್ಟೆಗಳಲ್ಲಿ ಜಾಗರೂಕತೆಯನ್ನು ಹೆಚ್ಚಿಸಲು ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಅಮ್ಮ ಕಾಲ್ ಮಾಡದಿದ್ದರೆ…- ಕೆಫೆ ಬ್ಲಾಸ್ಟ್ ಭಯಾನಕ ಸತ್ಯ ಬಿಚ್ಚಿಟ್ಟ ಟೆಕ್ಕಿ
Advertisement
Advertisement
ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ಮಾರುಕಟ್ಟೆ ಸಂಘಗಳು ಜಾಗರೂಕರಾಗಿರಲು ಮತ್ತು ತಮ್ಮ ಸ್ಥಳೀಯ ಪೊಲೀಸ್ ಠಾಣೆಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Advertisement
ಆವರಣದಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುವಂತೆ ಸಂಘ ಸಂಸ್ಥೆಗಳಿಗೆ ಸೂಚಿಸಲಾಗಿದೆ. ದೆಹಲಿ ಪೊಲೀಸರು ತನ್ನ ಬಾಂಬ್ ನಿಷ್ಕ್ರಿಯ ದಳ ಮತ್ತು ಬಾಂಬ್ ಪತ್ತೆ ತಂಡವನ್ನು ಎಚ್ಚರದಿಂದ ಇರುವಂತೆ ತಿಳಿಸಿದ್ದಾರೆ ಎಂದು ಮತ್ತೊಬ್ಬ ಅಧಿಕಾರಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಾಂಬ್ ಸ್ಫೋಟ ಪ್ರಕರಣ – ಇದುವರೆಗೆ ಯಾರನ್ನೂ ಬಂಧಿಸಿಲ್ಲ: ಪೊಲೀಸ್ ಆಯುಕ್ತ ಸ್ಪಷ್ಟನೆ
Advertisement
ಬೆಂಗಳೂರಿನ ಬ್ರೂಕ್‌ಫೀಲ್ಡ್ ಪ್ರದೇಶದ ದಿ ರಾಮೇಶ್ವರಂ ಕೆಫೆಯಲ್ಲಿ ಶನಿವಾರ ಕಡಿಮೆ ತೀವ್ರತೆಯ ಬಾಂಬ್ ಸ್ಫೋಟ ಸಂಭವಿಸಿದ್ದು, ಸಿಬ್ಬಂದಿ ಮತ್ತು ಗ್ರಾಹಕರು ಸೇರಿದಂತೆ 10 ಜನರು ಗಾಯಗೊಂಡಿದ್ದಾರೆ. ಸ್ಥಳೀಯ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
‘ಗ್ರಾಹಕರ ಸೋಗಿನಲ್ಲಿ ಬಂದಿದ್ದ ಶಂಕಿತನೊಬ್ಬ ಉಪಾಹಾರ ಗೃಹದ ಕೈ ತೊಳೆಯುವ ಪ್ರದೇಶದ ಬಳಿ ಬಿಟ್ಟ ಬ್ಯಾಗ್‌ನಲ್ಲಿ ಟೈಮರ್ ಅಳವಡಿಸಲಾದ ಸುಧಾರಿತ ಸ್ಫೋಟಕ ಸಾಧನದಿಂದ ಸ್ಫೋಟ ಸಂಭವಿಸಿದೆ’ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಾಮನ ಹೆಸರು ಇರೋದಕ್ಕೆ ರಾಮೇಶ್ವರಂ ಹೋಟೆಲ್ ಟಾರ್ಗೆಟ್ ಮಾಡಿದ್ದಾರೆ: ಯತ್ನಾಳ್