ನವದೆಹಲಿ: ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ನಾಪತ್ತೆಯಾಗಿರುವ ಘಟನೆ ದೆಹಲಿಯ ಲಾಲ್ ಬಹದ್ದೂರ್ ಶಾಸ್ತ್ರಿ ಆಸ್ಪತ್ರೆಯಲ್ಲಿ ನಡೆದಿದೆ. ಇದೀಗ ಮಹಿಳೆಯ ಕುಟುಂಬಸ್ಥರು ಪೊಲೀಸರ ಮೊರೆಹೋಗಿದ್ದು, ಆಕೆಯನ್ನು ಶೀಘ್ರವೇ ಪತ್ತೆ ಹಚ್ಚುವುದಾಗಿ ಪೊಲೀಸರು ಹೇಳಿದ್ದಾರೆ.
Advertisement
ಕಾಣೆಯಾದ ಮಹಿಳೆಯನ್ನು ರಜನಿ ಎಂದು ಗುರುತಿಸಲಾಗಿದ್ದು, ಹೊಟ್ಟೆನೋವಿನಿಂದ ಬಳಲುತ್ತಿದ್ದರಿಂದ 5 ತಿಂಗಳು ತುಂಬಿದ್ದ ರಜನಿ ಅವರನ್ನು ಲಾಲ್ ಬಹದ್ದೂರ್ ಶಾಸ್ತ್ರಿ ಆಸ್ಪತ್ರೆಗೆ ಬುಧವಾರ ದಾಖಲಿಸಲಾಗಿತ್ತು. ಸಂಜೆ 5 ಗಂಟೆ ಸುಮಾರಿಗೆ ಪತಿ ವಿನೋದ್ ಜೊತೆಗೆ ಊಟ ಮಾಡಲು ಹೋಗಿದ್ದ ರಜನಿ ನಂತರ ಕಾಣೆಯಾಗಿದ್ದು, ಅವರನ್ನು ಹಲವಾರು ಗಂಟೆಗಳ ಕಾಲ ಕುಟುಂಬಸ್ಥರು ಹುಡುಕಾಡಿದ್ದಾರೆ. ಆದರೆ ಮಹಿಳೆ ಬಗ್ಗೆ ಯಾವುದೇ ಸುಳಿವು ಸಿಗದ ಹಿನ್ನೆಲೆ ಕೊನೆಗೆ ಈ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 6 ವರ್ಷದ ಹಿಂದೆ ಮದುವೆ- 4ನೇ ಪತ್ನಿಗೆ ಡಿವೋರ್ಸ್ ಕೊಟ್ಟ 91ರ ರೂಪರ್ಟ್ ಮುರ್ಡೋಕ್
Advertisement
Advertisement
ಇದೀಗ ಮಹಿಳೆಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಅಲ್ಲದೇ ಈ ಬಗ್ಗೆ ಆಸ್ಪತ್ರೆ ಆಡಳಿತದೊಂದಿಗೆ ಮಾತನಾಡಲು ಪ್ರಯತ್ನಿಸಿದರೆ, ಎಲ್ಲಾ ಅಧಿಕಾರಿಗಳು ಜವಾಬ್ದಾರಿಯಿಂದ ಹಿಂದೆ ಸರಿಯುತ್ತಿದ್ದರು ಮತ್ತು ಮಾತನಾಡಲು ನಿರಾಕರಿಸಿದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು: ದಿನೇಶ್ ಗುಂಡೂರಾವ್