– ಬಿಎಸ್3 ಪೆಟ್ರೋಲ್, ಡೀಸೆಲ್ ವಾಹನಗಳ ಸಂಚಾರಕ್ಕೆ ತಡೆ
ನವದೆಹಲಿ: ದೆಹಲಿಯಲ್ಲಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ದೆಹಲಿ ಸರ್ಕಾರದಿಂದ ಮೂರನೇ ಹಂತದ ಕ್ರಮ ಜಾರಿಯಾಗಿದೆ.
Advertisement
ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಲೆಯಿಂದ ವಿನಾಯಿತಿ ನೀಡಲಾಗಿದೆ. ಆನ್‌ಲೈನ್ ಮೂಲಕ ತರಗತಿ ನಡೆಸಲು ಸರ್ಕಾರ ಸೂಚಿಸಿದೆ. BS 3 ಪೆಟ್ರೋಲ್, ಡೀಸೇಲ್ ವಾಹನಗಳ ಸಂಚಾರಕ್ಕೆ ತಡೆ ನೀಡಲಾಗಿದೆ.
Advertisement
Advertisement
ಸಿಎನ್‌ಜಿ, ಇವಿ ಸೇರಿದಂತೆ ಅಂತರರಾಜ್ಯಗಳ BS4 ಡಿಸೇಲ್ ಬಸ್‌ಗಳಿಗೆ ಮಾತ್ರ ದೆಹಲಿ ಪ್ರವೇಶ ಕಲ್ಪಿಸಿದೆ. ತುರ್ತು ಅಲ್ಲದ ನಿರ್ಮಾಣ ಮತ್ತು ಕಟ್ಟಡ ತೆರವು ಕಾರ್ಯಕ್ಕೆ ತಡೆ ನೀಡಲಾಗಿದೆ. ಸರ್ಕಾರ ಕಾಮಗಾರಿ, ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಕಟ್ಟಡಗಳ ಕಾಮಗಾರಿಗೆ ಮಾತ್ರ ಅನುಮತಿ ನೀಡಲಾಗಿದೆ.
Advertisement
ಇಡೀ ವಿಶ್ವದಲ್ಲೇ ಮಾಲಿನ್ಯಯುತ ನಗರಗಳ ಪಟ್ಟಿಯಲ್ಲಿ ದೆಹಲಿ ಮೊದಲ ಸ್ಥಾನದಲ್ಲಿದೆ. ದೆಹಲಿಯಲ್ಲಿ AQI 450 ಅನ್ನು ಮೀರಿದೆ. AQI 50 ರೊಳಗೆ ಉಸಿರಾಟಕ್ಕೆ ಯೋಗ್ಯ ಗಾಳಿ. AQI 50-100 ಮಧ್ಯಮ ಮಾಲಿನ್ಯದ ಗಾಳಿ. ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಮಾಲಿನ್ಯದ ಮೀತಿ ಮೀರಿದೆ.