Latest
ದೆಹಲಿ ಪ್ರತಿಭಟನೆ – ಟ್ರ್ಯಾಕ್ಟರ್ ಪಲ್ಟಿಯಾಗಿ ಮೃತಪಟ್ಟವನು ಆಸ್ಟ್ರೇಲಿಯಾದಲ್ಲಿ ವಿದ್ಯಾರ್ಥಿ

– ಪ್ರತಿಭಟನೆಯಲ್ಲಿ ಭಾಗಿಯಾದ ವಿಚಾರ ಮನೆಯವರಿಗೆ ಗೊತ್ತಿಲ್ಲ
ನವದೆಹಲಿ: ಗಣರಾಜೋತ್ಸವ ದಿನದಂದು ದೆಹಲಿಯಲ್ಲಿ ರೈತ ಹೋರಾಟದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟ ವ್ಯಕ್ತಿ ಆಸ್ಟ್ರೇಲಿಯಾದಲ್ಲಿ ಓದುತ್ತಿದ್ದ ವಿದ್ಯಾರ್ಥಿ ಎನ್ನುವ ವಿಚಾರ ಈಗ ಬೆಳಕಿಗೆ ಬಂದಿದೆ.
ಮೃತ ಯುವಕನನ್ನು ಉತ್ತರಪ್ರದೇಶ ರಾಂಪೂರಿನ ನರ್ವೀತ್ ಸಿಂಗ್(27) ಎಂದು ಗುರುತಿಸಲಾಗಿದೆ. ಈತ ಆಸ್ಟ್ರೇಲಿಯಾದ ಕಾಲೇಜು ಒಂದರಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದು 3 ದಿನಗಳ ಹಿಂದೆ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಬಂದಿದ್ದ.
#WATCH | A protesting farmer died after a tractor rammed into barricades and overturned at ITO today: Delhi Police
CCTV Visuals: Delhi Police pic.twitter.com/nANX9USk8V
— ANI (@ANI) January 26, 2021
ಕೆಲ ದಿನಗಳ ಹಿಂದೆ ಆಸ್ಟ್ರೇಲಿಯಾದಿಂದ ಮನೆಗೆ ಬಂದಿದ್ದ ನರ್ವೀತ್ ಏಕಾಏಕಿ 3 ದಿನಗಳ ಹಿಂದೆ ರೈತರ ಪ್ರತಿಭಟನೆಗೆ ಪಾಲ್ಗೊಳ್ಳಲು ದೆಹಲಿಗೆ ಬಂದಿದ್ದ. ಮಂಗಳವಾರ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸಿದ ರ್ಯಾಲಿಯಲ್ಲಿ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದ ಈತ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗುದ್ದಿ ಮುಂದಕ್ಕೆ ಹೋಗಲು ಯತ್ನಿಸುತ್ತಿದ್ದ. ಆದರೆ ಈ ವೇಳೆ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿ ಮೃತಪಟ್ಟಿದ್ದಾನೆ.
ನರ್ವೀತ್ ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದ ಮಾಹಿತಿ ಅವರ ಕುಟುಂಬದವರಿಗೆ ತಿಳಿದಿರಲಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ರೈತರು ಮಾತ್ರ ಪೊಲೀಸರು ಟಿಯರ್ ಗ್ಯಾಸ್ ಪ್ರಯೋಗಿಸಿದ ಕಾರಣ ಟ್ರ್ಯಾಕ್ಟರ್ ನ ನಿಯಂತ್ರಣ ಕಳೆದುಕೊಂಡು ನರ್ವೀತ್ ಸಿಂಗ್ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿದ್ದಾರೆ
