ನವದೆಹಲಿ: ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ (Delhi Railway Station Stampede) ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಜನಸಂದಣಿ ನಿರ್ವಹಣೆಗೆ ಸಂಬಂಧಿಸಿದ ನಿಯಮಗಳನ್ನು ಸರಿಯಾಗಿ ಅನುಷ್ಠಾನಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ವಜಾಗೊಳಿಸಿದೆ.ಇದನ್ನೂ ಓದಿ: ಪೋಕ್ಸೊ ಕೇಸ್‌ನಲ್ಲಿ ಬಿಎಸ್‌ವೈಗೆ ಶುರುವಾಯ್ತು ಸಂಕಷ್ಟ – ಕೋರ್ಟ್‌ನಿಂದ ಸಮನ್ಸ್ ಜಾರಿ
ಈ ಕಾಲ್ತುಳಿತ ಪ್ರಕರಣದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಇಲಾಖೆ ಹೇಳಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ 200 ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಎಲ್ಲ ರಾಜ್ಯಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಜನಸಂದಣಿ ನಿರ್ವಹಣೆಗೆ ಸಂಬಂಧಿಸಿದ ನಿಯಮಗಳನ್ನು ಸರಿಯಾಗಿ ಅನುಷ್ಠಾನಗೊಳಿಸುವಂತೆ ಮತ್ತು ನಿರ್ದೇಶನ ನೀಡುವಂತೆ ಆನಂದ್ ಕಾನೂನು ನೆರವು ವೇದಿಕೆ ಮನವಿ ಮಾಡಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಅರ್ಜಿದಾರರ ವಾದ ಪುರಸ್ಕರಿಸಲಿಲ್ಲ, 200 ಸಾವುಗಳು ಸಂಭವಿಸಿವೆ ಎಂಬ ಆರೋಪಕ್ಕೆ ಪುರಾವೆ ಏನಿದೆ ಎಂದು ಪ್ರಶ್ನಿಸಿತು. ಅರ್ಜಿದಾರರ ಪರ ವಕೀಲರ ಸಂಕ್ಷಿಪ್ತ ವಿಚಾರಣೆಯ ನಂತರ ಅರ್ಜಿಯನ್ನು ವಜಾಗೊಳಿಸಿತು. ಬಾಧಿತ ಜನರು ನ್ಯಾಯಾಲಯಕ್ಕೆ ಬರಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.ಇದನ್ನೂ ಓದಿ: ಮಾ.22 ರಂದು ಕರ್ನಾಟಕ ಬಂದ್