ನವದೆಹಲಿ: ದಿನೇ ದಿನೆ ದೆಹಲಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಒಟ್ಟು 1,607 ಕೋವಿಡ್-19 ಹೊಸ ಪ್ರಕರಣಗಳು ದಾಖಲಾಗಿವೆ ಮತ್ತು ಪಾಸಿಟಿವ್ ಪ್ರಮಾಣವು ಶೇ.5.28ಕ್ಕೆ ತಲುಪಿದೆ. ಪ್ರಸ್ತುತ ದೆಹಲಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,609ಕ್ಕೆ ಏರಿಕೆಯಾಗಿದೆ ಎಂದು ಶುಕ್ರವಾರ ಬಿಡುಗಡೆಯಾದ ಹೆಲ್ತ್ ಬುಲೆಟಿನ್‍ನಲ್ಲಿ ವರದಿಯಾಗಿದೆ.
ಒಟ್ಟು 139 ಮಂದಿ ಕೊರೊನಾ ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದಾರೆ. 3,863 ಮಂದಿ ಹೋಂ ಕ್ವಾರಂಟೈನ್‍ನಲ್ಲಿದ್ದಾರೆ. ಪ್ರಸ್ತುತ ಭಾರತದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು 18,684 ರಷ್ಟಿದೆ ಮತ್ತು ಕಳೆದ 24 ಗಂಟೆಗಳಲ್ಲಿ 3,688 ಹೊಸ ಪ್ರಕರಣಗಳು ದಾಖಲಾಗಿವೆ. ಇದನ್ನೂ ಓದಿ: ಸ್ಯಾಂಡಲ್ ವುಡ್ ಸಿಂಡ್ರೇಲಾ ರಾಧಿಕಾ ಪಂಡಿತ್ ಗೆ ಭಯಂಕರ ಬೇಡಿಕೆ ಇಟ್ಟ ಫ್ಯಾನ್ಸ್
ದೆಹಲಿಯಲ್ಲಿ 1,607 ಪ್ರಕರಣಗಳು ದಾಖಲಾಗಿದ್ದರೆ, ಹರಿಯಾಣದಲ್ಲಿ 624 ಪ್ರಕರಣಗಳು, ಕೇರಳದಲ್ಲಿ 412 ಪ್ರಕರಣಗಳು, ಉತ್ತರ ಪ್ರದೇಶ 293 ಪ್ರಕರಣಗಳು ಮತ್ತು ಮಹಾರಾಷ್ಟ್ರದಲ್ಲಿ 148ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಈ ಐದು ರಾಜ್ಯಗಳಿಂದ ಶೇ.83.61 ಪ್ರಕರಣಗಳು ವರದಿಯಾಗಿದ್ದರೆ, ದೆಹಲಿವೊಂದರಲ್ಲಿಯೇ ಶೇ. 43.57ರಷ್ಟು ಹೊಸ ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 50 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 5,23,803ಕ್ಕೆ ಏರಿಕೆಯಾಗಿದೆ. ಪ್ರತಿದಿನದ ಪಾಸಿಟಿವಿಟಿ ದರವು ಶೇ. 0.74 ರಷ್ಟಿದ್ದರೆ, ವಾರದ ಪಾಸಿಟಿವಿಟಿ ದರವು ಶೇ.0.66 ರಷ್ಟಿದೆ. ಇದನ್ನೂ ಓದಿ: ಜಮೀನು ಹಣ ನೀಡಲ್ಲ ಎಂದು ತಂದೆಯ 13 ಲಕ್ಷ ರೂ. ಕದ್ದ ಮಗ
ದೇಶದಲ್ಲಿ ಗುಣಮುಖರಾದವರ ಸಂಖ್ಯೆ ಶೇ.98.74 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 2,755 ಮಂದಿ ಚೇತರಿಕೆಯಾಗಿದ್ದು, ಭಾರತದಲ್ಲಿ ಒಟ್ಟು ಚೇತರಿಕೆಗೊಂಡವರ ಸಂಖ್ಯೆ 4,25,33,377 ಕ್ಕೆ ತಲುಪಿದೆ.