ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ (Delhi Air Pollution) ತಗ್ಗಿದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು ಪುನರಾರಂಭಗೊಂಡಿವೆ. ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳನ್ನು (Delhi Schools) ತೆರೆಯಲಾಗಿದ್ದು, ಇದರಲ್ಲಿ ನರ್ಸರಿಯಿಂದ 12ನೇ ತರಗತಿವರೆಗಿನ ಎಲ್ಲಾ ತರಗತಿಗಳನ್ನು ಭೌತಿಕ ಕ್ರಮದಲ್ಲಿ ನಡೆಸಲಾಗುತ್ತಿದೆ. ಆದರೆ, ಕೆಲವು ಖಾಸಗಿ ಶಾಲೆಗಳು ನರ್ಸರಿಯಿಂದ 5ನೇ ತರಗತಿವರೆಗಿನ ತರಗತಿಗಳನ್ನು ಮುಚ್ಚಲು ನಿರ್ಧರಿಸಿವೆ.
Advertisement
ಮಾಲಿನ್ಯ ಇನ್ನೂ ಕೆಟ್ಟ ಪರಿಸ್ಥಿತಿಯಲ್ಲಿದ್ದು, ಸಣ್ಣ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಾಗುತ್ತಿದೆ ಎಂದು ಖಾಸಗಿ ಶಾಲೆಗಳು ಹೇಳಿವೆ. ಈ ಸಂಬಂಧ ಶಿಕ್ಷಣ ನಿರ್ದೇಶನಾಲಯ ಸುತ್ತೋಲೆ ಹೊರಡಿಸಿದ್ದು, ಒಂದು ವಾರದವರೆಗೆ ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆ ಹಾಗೂ ಹೊರಾಂಗಣ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ: ಗಾಜಾದ ಆಸ್ಪತ್ರೆಯನ್ನೇ ಉಗ್ರ ಚಟುವಟಿಕೆಗಳ ತಾಣವಾಗಿಸಿದ ಹಮಾಸ್- ಇಸ್ರೇಲ್ ವೀಡಿಯೋ ಸಾಕ್ಷಿ
Advertisement
Advertisement
ದೆಹಲಿ ವಿಶ್ವವಿದ್ಯಾನಿಲಯವು ವಾಯು ಮಾಲಿನ್ಯದ ದೃಷ್ಟಿಯಿಂದ ನವೆಂಬರ್ 13-19ರ ವರೆಗೆ ಚಳಿಗಾಲದ ರಜೆಯನ್ನು ಘೋಷಿಸಿತ್ತು. ಮಾಲಿನ್ಯ ಕಡಿಮೆಯಾದ ಹಿನ್ನೆಲೆಯಲ್ಲಿ ಸೋಮವಾರದಿಂದ ಎಲ್ಲ ಕಾಲೇಜುಗಳಲ್ಲಿ ತರಗತಿಗಳನ್ನು ಆರಂಭಿಸಿದೆ. ಕಾಲೇಜುಗಳು ಬಹಳ ದಿನಗಳಿಂದ ಮುಚ್ಚಲ್ಪಟ್ಟಿವೆ, ಹೀಗಾಗಿ ಶಿಕ್ಷಣಕ್ಕೆ ನಷ್ಟವಾಗದಂತೆ ಕಾಲೇಜುಗಳನ್ನು ತೆರೆಯುವುದು ಕಡ್ಡಾಯವಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಮಿಚೆಲ್ ಮಾರ್ಷ್- ಭಾರೀ ಟ್ರೋಲ್
Advertisement
ಗಾಳಿಯ ದಿಕ್ಕು ಮತ್ತು ಗಾಳಿಯ ವೇಗದಲ್ಲಿನ ಬದಲಾವಣೆಯಿಂದಾಗಿ ಗಾಳಿಯ ಗುಣಮಟ್ಟವು ತೀವ್ರ ವರ್ಗದಿಂದ ಕಡಿಮೆಯಾಗಿದೆ ಆದರೆ ಗಾಳಿಯು ಇನ್ನೂ ಅತ್ಯಂತ ಕಳಪೆ ವಿಭಾಗದಲ್ಲಿದೆ. ರಾಜಧಾನಿಯಲ್ಲಿನ ಗಾಳಿಯ ಗುಣಮಟ್ಟವು ಒಟ್ಟಾರೆ AQI 398 ರೊಂದಿಗೆ ಅತ್ಯಂತ ಕಳಪೆ ವರ್ಗದಲ್ಲಿದೆ. ಬೆಳಗಿನ ಜಾವ ಗಾಳಿ ಬೀಸುತ್ತಿರುವುದರಿಂದ ಮಂಜು ಮತ್ತು ಹೊಗೆಯ ಪ್ರಮಾಣ ಕಡಿಮೆಯಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ವಾಯು ಮಾಲಿನ್ಯ – ಪಂಜಾಬ್, ಹರಿಯಾಣ, ಯುಪಿ ಸರ್ಕಾರಕ್ಕೂ ಸುಪ್ರೀಂ ಚಾಟಿ