ನವದೆಹಲಿ: ರಾಷ್ಟ್ರ ರಾಜಧಾನಿಯ ಆಜಾದ್ ಮಾರುಕಟ್ಟೆ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆಯೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮೂರು ಕಟ್ಟಡಗಳಿಗೆ ವ್ಯಾಪಿಸಿರುವ ಬೆಂಕಿಯಿಂದ 5 ಅಂಗಡಿಗಳು ಸುಟ್ಟು ಭಸ್ಮವಾಗಿವೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಆಜಾದ್ ಮಾರುಕಟ್ಟೆಯಲ್ಲಿ ಸಂಭವಿಸಿರುವ ಅಗ್ನಿ ದುರಂತವನ್ನು 20 ಅಗ್ನಿಶಾಮಕ ದಳದ ವಾಹನಗಳ ಸಹಾಯದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ವಿಭಾಗೀಯ ಅಧಿಕಾರಿ ರಾಜಿಂದರ್ ಅತ್ವಾಲ್ ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀರಾಮ ಶೋಭಾಯಾತ್ರೆ ವೇಳೆ ಕಲ್ಲುತೂರಾಟ- ಪವರ್ ಕಟ್ ಮಾಡಿ ಕಿಡಿಗೇಡಿಗಳ ದುಷ್ಕೃತ್ಯ
Advertisement
ಈ ನಡುವೆ ಆನಂದ್ ಪರ್ವತ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದ್ದು, 6 ಮಂದಿ ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಬಿ.ಎಲ್.ಕಪೂರ್ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಸ್ಥಳದಲ್ಲಿ 10 ಅಗ್ನಿಶಾಮಕ ವಾಹನಗಳೊಂದಿಗೆ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ವರದಿಯಾಗಿದೆ.
Advertisement