ನವದೆಹಲಿ: ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಹವಾಮಾನ ಇಲಾಖೆಯ ಎಚ್ಚರಿಕೆ ಹಿನ್ನೆಲೆಯಲ್ಲಿ ದೆಹಲಿಯ (New Delhi) ಎಲ್ಲಾ ಶಾಲೆಗಳಿಗೆ ಸೋಮವಾರ ರಜೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಭಾನುವಾರ ಘೋಷಿಸಿದ್ದಾರೆ.
ಇಂದು ಬೆಳಿಗ್ಗೆಯಿಂದ ದೆಹಲಿಯಲ್ಲಿ ಮಳೆಯ (Delhi Rain) ಪ್ರಮಾಣ ಹೆಚ್ಚಾಗತೊಡಗಿದ್ದು, ದೆಹಲಿಯ ಹಲವು ಭಾಗಗಳಲ್ಲಿ ರಸ್ತೆಗಳು ಜಾಲವೃತವಾಗಿದೆ. ಸದ್ಯ ನಾಳೆ ಸಹ ದೆಹಲಿಯಲ್ಲಿ ಮಳೆ ಮುಂದುವರಿಯುವ ಸಂಭವವಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಹಿಮಾಚಲದಲ್ಲಿ ಭಾರೀ ಮಳೆ – ಕೊಚ್ಚಿ ಹೋಯ್ತು ಕಾರು, ಕುಸಿದು ಬಿದ್ದವು ಅಂಗಡಿಗಳು
Advertisement
Advertisement
ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 153 ಮಿಮೀ ಮಳೆಯಾಗಿದೆ. ಇದು 1982 ರಿಂದ ಇಲ್ಲಿಯವರೆಗೆ ಜುಲೈ ತಿಂಗಳಲ್ಲಿ ಒಂದೇ ದಿನದಲ್ಲಾದ ಅತಿ ಹೆಚ್ಚು ಮಳೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
Advertisement
Advertisement
ದೆಹಲಿಯಲ್ಲಿ ಮುಂದಿನ 2-3 ದಿನಗಳ ಕಾಲ ಹೆಚ್ಚಿನ ತೀವ್ರತೆಯ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದನ್ನೂ ಓದಿ: ವಂದೇ ಭಾರತ್ ರೈಲಿಗೆ ಹೊಸ ಬಣ್ಣ – ಫೋಟೋ ಹಂಚಿಕೊಂಡ ಅಶ್ವಿನಿ ವೈಷ್ಣವ್
Web Stories