ಮಂಗಳೂರು: ದೆಹಲಿಯ ಗುರುಗ್ರಾಮದಲ್ಲಿ ಐಸ್ ಸ್ಕೇಟಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಆಯೋಜಿಸಿದ ರಾಷ್ಟ್ರೀಯ ಸ್ಪೀಡ್ ಐಸ್ ಸ್ಕೇಟಿಂಗ್ ಚಾಂಪಿಯನ್‍ಶಿಪ್-2019 ನಲ್ಲಿ ಮಂಗಳೂರಿನ ಅನಘಾ ಬೆಳ್ಳಿ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ.
2019ರ ಆಗಸ್ಟ್ 8 ಹಾಗೂ 9 ರಂದು ನಡೆದ ರಾಷ್ಟ್ರೀಯ ಮಟ್ಟದ ಐಸ್ ಸ್ಕೇಟಿಂಗ್‍ನ 500 ಮೀಟರ್ ಐಸ್ ರಿಂಕ್ ರೇಸ್‍ನ 10 ವರ್ಷದೊಳಗಿನ ವಿಭಾಗದಲ್ಲಿ ಅನಘಾ ಬೆಳ್ಳಿ ಪದಕ ಪಡೆದಿದ್ದಾಳೆ.
ಮಂಗಳೂರಿನ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾದ ಅನಘಾ ಬಿಜೈ ಲೂಡ್ರ್ಸ್ ಸೆಂಟ್ರಲ್ ಸ್ಕೂಲ್‍ನ 4 ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾಳೆ. ಮಂಗಳೂರಿನ ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್‍ನ ಸದಸ್ಯೆಯಾಗಿರುವ ಅನಘಾ ತರಬೇತುದಾರರಾದ ಮೋಹನ್ ದಾಸ್.ಕೆ ಹಾಗೂ ಜಯರಾಜ್ ಅವರಿಂದ ತರಬೇತಿ ಪಡೆಯುತ್ತಿದ್ದಾಳೆ. ಇದರ ಜೊತೆಗೆ ರಾಷ್ಟ್ರೀಯ ಐಸ್ ಸ್ಕೇಟಿಂಗ್ ತರಬೇತುದಾರ ಅವಧೂತ್ ಥಾವಡೆ ಅವರಿಂದಲೂ ಅನಘಾ ಐಸ್ ಸ್ಕೇಟಿಂಗ್ ತರಬೇತಿ ಪಡೆಯುತ್ತಿದ್ದಾಳೆ.