ನವದೆಹಲಿ: ರಾಷ್ಟ್ರ ರಾಜಧಾನಿಯ ಮತ್ತೊಂದು ಆಘಾತಕಾರಿ ಘಟನೆ ನಡೆದಿದ್ದು, ಶನಿವಾರ ತಡರಾತ್ರಿ ದೆಹಲಿಯ ವಸಂತ್ ವಿಹಾರ್ ಪ್ರದೇಶದಲ್ಲಿನ ಅಪಾರ್ಟ್‍ಮೆಂಟ್‍ನಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ.
ಮಂಜು (54) ಮಹಿಳೆ ಮತ್ತು ಅವರ ಇಬ್ಬರು ಪುತ್ರಿಯರಾದ ಅಂಶಿಕಾ (27) ಮತ್ತು ಅಂಕು (25) ಅವರು ತಮ್ಮ ಮನೆಯೊಳಗೆ ಗ್ಯಾಸ್‍ನ ವಿಷಕಾರಿ ಹೊಗೆಯನ್ನು ಸೇವಿಸಿ ಸಾವನ್ನಪ್ಪಿದ್ದಾರೆ. ಶನಿವಾರ ರಾತ್ರಿ 8.55ಕ್ಕೆ ವಸಂತ ವಿಹಾರ್‌ನಲ್ಲಿರುವ ವಸಂತ ಅಪಾರ್ಟ್‍ಮೆಂಟ್‍ನ ಫ್ಲಾಟ್ ಸಂಖ್ಯೆ 207 ಒಳಗಿನಿಂದ ಬೀಗ ಹಾಕಲ್ಪಟ್ಟಿದೆ. ಮನೆಯಲ್ಲಿರುವ ಯಾರು ಪ್ರತಿಕ್ರಿಯಿಸುತ್ತಿಲ್ಲ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ. ಈ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ನಿಧಿಗಳ್ಳರಿಂದ ಐತಿಹಾಸಿಕ ಬೀರೇಶ್ವರ ದೇವರ ವಿಗ್ರಹ ಕಳ್ಳತನ
Advertisement
Advertisement
ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ನೋಡಿದಾಗ ಎಲ್ಲ ಕಡೆಯಿಂದ ಬಾಗಿಲು ಮತ್ತು ಕಿಟಕಿ ಮುಚ್ಚಿರುವುದು ಕಂಡುಬಂದಿದೆ. ಈ ಹಿನ್ನೆಲೆ ಪೊಲೀಸರು ಬಾಗಿಲು ಒಡೆದು ತೆಗೆದಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್‌ನ್ನು ಹೊರತೆಗೆಯಲಾಗಿದೆ. ರೂಮ್‍ನಲ್ಲಿ ಪರಿಶೀಲಿಸಿದಾಗ, ಮೂರು ಶವಗಳು ಹಾಸಿಗೆಯ ಮೇಲೆ ಕಂಡುಬಂದಿದೆ. ಅಷ್ಟೇ ಅಲ್ಲದೇ ಈ ವೇಳೆ ಆತ್ಮಹತ್ಯೆ ಪತ್ರವೂ ಇತ್ತು. ಈ ಹಿನ್ನೆಲೆ ಇದು ಆಕಸ್ಮಿಕವಲ್ಲ, ಆತ್ಮಹತ್ಯೆ ಎಂದು ಶಂಕಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ(ನೈಋತ್ಯ) ಮನೋಜ್.ಸಿ ಹೇಳಿದರು.
Advertisement
Advertisement
ಏಪ್ರಿಲ್ 2021 ರಲ್ಲಿ ಮಂಜು ಅವರ ಪತಿ ಕೋವಿಡ್‍ನಿಂದ ನಿಧನರಾಗಿದ್ದರು. ಈ ಹಿನ್ನೆಲೆ ಕುಟುಂಬವು ಖಿನ್ನತೆಗೆ ಒಳಗಾಗಿತ್ತು. ಅಷ್ಟೇ ಅಲ್ಲದೇ ಮಂಜು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದರು. ಮೇಲ್ನೋಟಕ್ಕೆ ಅವರು ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿದ್ದಾರೆಂದು ತೋರುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಾವಿರ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಡೇಟಾ ಸಾಕ್ಷರತೆಗೆ ಐಒಎ ಆಸಕ್ತಿ: ಅಶ್ವಥ್ ನಾರಾಯಣ್