ನವದೆಹಲಿ: ಕಳೆದ 8 ವರ್ಷಗಳಿಂದ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದು, 14 ಬಾರಿ ಗರ್ಭಪಾತಕ್ಕೊಳಗಾಗಿದ್ದ ಮಹಿಳೆ ಕೊನೆಗೆ ಆತ್ಮಹತ್ಯೆ ಮಾಡಿ ಕೊಂಡಿದ್ದಾಳೆ. ಜುಲೈ 5 ರಂದು ಆಗ್ನೇಯ ದೆಹಲಿಯ ಜೈತ್ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕಳೆದ ಎಂಟು ವರ್ಷಗಳ ಅವಧಿಯಲ್ಲಿ 33 ವರ್ಷದ ಮಹಿಳೆಯೊಬ್ಬರು ಗೆಳೆಯನ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದು 14 ಬಾರಿ ಗರ್ಭಪಾತಕ್ಕೆ ಒಳಗಾಗಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 6 ಜನ ಮಕ್ಕಳ ಮುಂದೆಯೇ ಪತ್ನಿ ಹತ್ಯೆಗೈದು ಕಡಾಯಿಲ್ಲಿ ಬೇಯಿಸಿದ ಕ್ರೂರಿ ಗಂಡ!
Advertisement
Advertisement
ಮದುವೆಯ ಭರವಸೆಯ ಮೇರೆಗೆ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದ ವ್ಯಕ್ತಿಯೊಂದಿಗೆ ಲಿವ್-ಇನ್ ಸಂಬಂಧ ಹೊಂದಿದ್ದ, ಕೊನೆಗೆ ಮದುವೆಯಾಗಲು ನಿರಾಕರಿಸಿದ್ದಾನೆ. ಹೀಗಾಗಿ ನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಆಕೆ ಡೆತ್ ನೋಟ್ ನಲ್ಲಿ ಬರೆದಿದ್ದಾಳೆ.
Advertisement
ಮಹಿಳೆ ತನ್ನ ಪತಿಯಿಂದ ಸುಮಾರು 7-8 ವರ್ಷಗಳಿಂದ ದೂರವಾಗಿದ್ದಳೆಂದು ಬಳಿಕ ಆರೋಪಿಯೊಂದಿಗೆ ಕಳೆದ 8 ವರ್ಷಗಳಿಂದ ಲಿವಿಂಗ್ ರಿಲೇಷನ್ನಲ್ಲೇ ಇದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Advertisement
ನೋಯ್ಡಾದ ಸಾಫ್ಟ್ ವೇರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಆರೋಪಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಪತ್ತೆಗಾಗಿ ಬಲೆ ಬೀಸಲಾಗಿದೆ. ಇದನ್ನೂ ಓದಿ: ಜೇಮ್ಸ್ ವೆಬ್ ಟೆಲಿಸ್ಕೋಪ್ನಲ್ಲಿ ಸೆರೆ ಸಿಕ್ಕ ಗುರು-ಚಂದ್ರನ ಬೆರಗುಗೊಳಿಸುವ ಫೋಟೋ
ಬಿಹಾರದ ಮುಜಾಫರ್ಪುರದಲ್ಲಿ ನೆಲೆಸಿರುವ ಆಕೆಯ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಹಸ್ತಾಂತರಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ), 376 (ಅತ್ಯಾಚಾರ) ಮತ್ತು 313 (ಮಹಿಳೆಯ ಒಪ್ಪಿಗೆಯಿಲ್ಲದೆ ಗರ್ಭಪಾತಕ್ಕೆ ಕಾರಣವಾಗುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.