ನವದೆಹಲಿ: ದೆಹಲಿ ಮದ್ಯ ನೀತಿ (Delhi Liquor Policy) ಅಕ್ರಮದಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 2,026 ಕೋಟಿ ರೂ. ಆದಾಯ ನಷ್ಟವಾಗಿದೆ ಎಂದು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ವರದಿ ಬಹಿರಂಗಪಡಿಸಿದೆ.
ಮದ್ಯ ನೀತಿಯಲ್ಲಿ ಬಹಳಷ್ಟು ಲೋಪದೋಷಗಳು ಕಂಡುಬಂದಿದ್ದು, ಪರವಾನಗಿ ನೀಡುವಲ್ಲಿ ನಿಯಮ ಉಲ್ಲಂಘನೆ ಮಾಡಿರುವುದು ವರದಿಯಲ್ಲಿ ಕಂಡುಬಂದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: 5 ವರ್ಷಗಳಲ್ಲಿ 64 ಜನರಿಂದ ಲೈಂಗಿಕ ಶೋಷಣೆ – ಕರಾಳ ಅನುಭವ ಬಿಚ್ಚಿಟ್ಟ ದಲಿತ ಬಾಲಕಿ
Advertisement
Advertisement
ಈ ಹಿಂದೆ ಕೇಜ್ರಿವಾಲ್ ನೇತೃತ್ವದ ಸರ್ಕಾರ (Kejriwal’s Government) ಜಾರಿಗೊಳಿಸಿದ್ದ ಮದ್ಯ ನೀತಿಯು ಉದ್ದೇಶಿತ ಗುರಿ ಸಾಧಿಸುವಲ್ಲಿ ವಿಫಲವಾಗಿದೆ. ಮುಖ್ಯವಾಗಿ ಆಪ್ ನಾಯಕರು ಕಿಕ್‌ಬ್ಯಾಕ್ ಲಾಭ ಪಡೆದಿದ್ದಾರೆ. ಮದ್ಯ ನೀತಿ ಅನುಷ್ಠಾನಗೊಳಿಸುವಲ್ಲಿ ಅಂದಿನ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನೇತೃತ್ವದ ಸಚಿವರ ಗುಂಪು ತಜ್ಞರ ಸಮಿತಿಯ ಶಿಫಾರಸುಗಳನ್ನು ಕಡೆಗಣಿಸಿದೆ ಎಂದು ಸಿಎಜಿ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಮದ್ವೆಯಾಗುವಂತೆ ಒತ್ತಡ – ಲಿವ್ ಇನ್ ಗೆಳತಿ ಕೊಂದು ಶವವನ್ನ 8 ತಿಂಗಳು ಫ್ರಿಡ್ಜ್‌ನಲ್ಲಿಟ್ಟಿದ್ದ ಸೈಕೋ
Advertisement
Advertisement
ಹೊಸ ಮದ್ಯ ನೀತಿ ದೆಹಲಿಯ ವಿಧಾನಸಭೆಯಲ್ಲಿ ಮಂಡನೆಯಾಗದೆಯೇ ಜಾರಿಗೆ ತರಲಾಗಿದೆ. ನೀತಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಕ್ಯಾಬಿನೆಟ್ ಅಥವಾ ರಾಜ್ಯಪಾಲರ ಅನುಮೋದನೆಯಿಲ್ಲದೆ ತೆಗೆದುಕೊಳ್ಳಲಾಗಿದೆ. ಎಲ್ಲಾ ಘಟಕಗಳಿಗೆ ಬಿಡ್ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಅಲ್ಲದೇ ಬಿಡ್ ದಾರರ ಆರ್ಥಿಕ ಪರಿಸ್ಥಿತಿಯನ್ನೂ ಪರಿಶೀಲಿಸಿರಲಿಲ್ಲ. ಇದರೊಂದಿಗೆ ಹೆಚ್ಚುವರಿಯಾಗಿ ನಿಯಮ ವಿಧಿಸುವವರಿಗೆ ಉದ್ದೇಶಪೂರ್ವಕವಾಗಿ ದಂಡ ವಿಧಿಸುವುದನ್ನು ಕೈಬಿಡಲಾಗಿದೆ ಎಂದು ಸಿಎಜಿ ವರದಿ ಹೇಳಿದೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ವರ್ಷದ ಸಂಭ್ರಮ – ಮಂದಿರ ಅಲಂಕಾರಕ್ಕೆ 50 ಕ್ವಿಂಟಾಲ್ ಹೂವು
ಏನಿದು ಹಗರಣ?
ಕೋವಿಡ್ 2ನೇ ಅಲೆ ಉತ್ತುಂಗದಲ್ಲಿದ್ದಾಗ ಮನೀಶ್ ಸಿಸೋಡಿಯಾ 2021ರ ಏಪ್ರಿಲ್‌ನಲ್ಲಿ ಕ್ಯಾಬಿನೆಟ್ ಅನುಮೋದನೆ ಇಲ್ಲದೇ ಮದ್ಯದಂಗಡಿ ಟೆಂಡರ್‌ಗೆ ಅರ್ಜಿ ಸಲ್ಲಿಸಿದವರ 144.36 ಕೋಟಿ ಪರವಾನಗಿ ಶುಲ್ಕವನ್ನು ಮನ್ನಾ ಮಾಡಲು ಆದೇಶ ಹೊರಡಿಸುತ್ತಾರೆ. ಈ ಮಹತ್ವದ ನಿರ್ಧಾರದ ಬಳಿಕ ಮೇ ತಿಂಗಳಿನಲ್ಲಿ ಕೇಜ್ರಿವಾಲ್ ನೇತೃತ್ವದ ಕ್ಯಾಬಿನೆಟ್ ಸಭೆ ಕರೆದು ಅಬಕಾರಿ ನೀತಿಯಲ್ಲಿ ಬದಲಾವಣೆ ಮಾಡುತ್ತದೆ. ಮದ್ಯವನ್ನು ಮನೆಗ ಹೋಮ್ ಡೆಲಿವರಿ ಮಾಡಬಹುದು ಅಷ್ಟೇ ಅಲ್ಲದೇ ಮದ್ಯದ ಅಂಗಡಿಗಳನ್ನು ಬೆಳಗಿನ ಜಾವ 3 ಗಂಟೆಯವರೆಗೆ ತೆರೆಯಬಹುದು. ಪರವಾನಗಿದಾರರು ಅನಿಯಮಿತ ರಿಯಾಯಿತಿಗಳನ್ನು ನೀಡಲು ನೀತಿ ಅನುಮತಿ ಕಲ್ಪಿಸಿತ್ತು.
ಲೆಫ್ಟಿನೆಂಟ್ ಗವರ್ನರ್ ಅವರು ಕ್ಯಾಬಿನೆಟ್ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಳಿಕ ದೆಹಲಿ ಸರ್ಕಾರ ತನ್ನ ನಿರ್ಧಾರವನ್ನು ಹಿಂದಕ್ಕೆ ಪಡೆಯುತ್ತದೆ. ಆದರೆ ಸಿಸೋಡಿಯಾ ಕೈಗೊಂಡ ನಿರ್ಧಾರ ಮುಂದುವರಿಯುತ್ತದೆ. ಸರ್ಕಾರದ ನಿರ್ಧಾರ ಬಗ್ಗೆ ದೆಹಲಿ ಮುಖ್ಯ ಕಾರ್ಯದರ್ಶಿ ಅವರು ಲೆಫ್ಟಿನೆಂಟ್ ಗವರ್ನರ್ ಬಳಿ ದೂರು ನೀಡುತ್ತಾರೆ. ಸಿಸೋಡಿಯಾ ನಿರ್ಧಾರದಿಂದ ಸರ್ಕಾರಕ್ಕೆ ಭಾರೀ ನಷ್ಟವಾಗಿದೆ. ವಿಸ್ಕಿ ಮತ್ತು ವೈನ್ ಮಾರಾಟ ಅನುಕ್ರಮವಾಗಿ 60% ಮತ್ತು 87%ರಷ್ಟು ಭಾರೀ ಏರಿಕೆಯಾಗಿದ್ದರೂ ಆದಾಯ 80% ರಷ್ಟು ಇಳಿಕೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸುತ್ತಾರೆ.
ಕೇಜ್ರಿವಾಲ್- ಸಿಸೋಡಿಯಾ ಅವರು ಲೆಫ್ಟಿನೆಂಟ್ ಗವರ್ನರ್ ಗಮನಕ್ಕೆ ತಾರದೇ ತುರ್ತು ಕ್ಯಾಬಿನೆಟ್ ಸಭೆಯನ್ನು ಕರೆಯುತ್ತಾರೆ. ಸಿಸೋಡಿಯಾ ಅಕ್ರಮವಾಗಿ ಹೊರಡಿಸಿದ ಆದೇಶವನ್ನು ಸಕ್ರಮ ಮಾಡಲು ಕ್ಯಾಬಿನೆಟ್‌ನಲ್ಲಿ ಪ್ರಯತ್ನ ಮಾಡಲಾಗುತ್ತದೆ. ಈ ನಿರ್ಧಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಭಾರೀ ವಿರೋಧ ವ್ಯಕ್ತಪಡಿಸಿ ಪ್ರತಿಭಟಿಸುತ್ತದೆ. ವಿರೋಧ ವ್ಯಕ್ತವಾಗುತ್ತಿದ್ದಂತೆ 2022ರ ಜುಲೈನಲ್ಲಿ ಮದ್ಯ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಲೆಫ್ಟಿನೆಂಟ್ ಗವರ್ನರ್ ಅವರು ಆದೇಶ ಹೊರಡಿಸುತ್ತಾರೆ. 2022ರ ಜುಲೈನಲ್ಲಿ ಕೇಜ್ರಿವಾಲ್ ಸರ್ಕಾರ ಈ ಹಿಂದೆ ಹೊರಡಿಸಿದ್ದ ಅಬಕಾರಿ ನೀತಿಯನ್ನು ಹಿಂದಕ್ಕೆ ಪಡೆಯುತ್ತದೆ.