ಬೆಂಗಳೂರು: ಮಾಲ್‌ನಲ್ಲಿ ಕ್ರಿಸ್ಮಸ್ ಆಚರಿಸುತ್ತಿದ್ದಾಗ ಯುವತಿಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ ಡೆಲಿವರಿ ಬಾಯ್‌ನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಗುವಾಹಟಿ ಮೂಲದ ಮನೂಜ್ ಚಾಂದ್(27) ಬಂಧಿತ ಆರೋಪಿ. ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಕೇರಳ ದರ್ಬಾರ್ – ಅಕ್ರಮ ಒತ್ತುವರಿ ತೆರವು ಮಾಡಿದ್ದೇ ಅಪರಾಧನಾ? ಸರ್ಕಾರದ ಗಟ್ಟಿ ಧ್ವನಿ ಯಾಕಿಲ್ಲ..?
ಡಿ.25ರಂದು ರಾತ್ರಿ 9:30ರ ಸುಮಾರಿಗೆ ಮಾಲ್‌ನಲ್ಲಿ ಕ್ರಿಸ್‌ಮಸ್ ಆಚರಣೆ ವೇಳೆ ಈ ಘಟನೆ ನಡೆದಿದೆ. ಉದ್ದೇಶಪೂರ್ವಕವಾಗಿ ಯುವತಿಯ ಬಳಿ ಹೋಗಿ, ಖಾಸಗಿ ಅಂಗ ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ. ಯುವತಿ ನೀಡಿದ ದೂರಿನ ಆಧಾರದ ಮೇಲೆ ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಿಶೀಲನೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಇದನ್ನೂ ಓದಿ: ಮಹಾತ್ಮ ಗಾಂಧೀಜಿ ಹೆಸರನ್ನ ಇತಿಹಾಸದಿಂದ ಅಳಿಸಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

