ಬೆಂಗಳೂರು: ಡೆಲಿವರಿ ಬಾಯ್ (Delivery Boy) ಒಬ್ಬ ರಸ್ತೆಯಲ್ಲಿ ಹೋಗ್ತಿದ್ದ ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿದ ಘಟನೆ ಕೊತ್ತನೂರಿನ ವಿಧಾನಸೌಧ ಲೇಔಟ್‌ನಲ್ಲಿ ನಡೆದಿದೆ.
ಮನೆಯ ಮುಂದೆ ಬಿದ್ದಿದ್ದ ಬಾಕ್ಸ್‌ನ್ನು ಯುವತಿ ತೆಗೆದುಕೊಂಡು ಹೋಗುತ್ತಿದ್ದಳು. ಈ ವೇಳೆ ಯುವಕ ರಸ್ತೆಯಲ್ಲಿ ಬಟ್ಟೆಬಿಚ್ಚಿ ಅಸಭ್ಯವಾಗಿ ವರ್ತಿಸಿ ಬಾ ಎಂದು ಕರೆದಿದ್ದಾನೆ. ಅಷ್ಟಕ್ಕೆ ಸುಮ್ಮನಾಗದೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಯುವತಿಯನ್ನು ಹಿಂದಿನಿಂದ ತಬ್ಬಿಕೊಂಡು, ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ತಡೆಯಲು ಯತ್ನಿಸಿದಾಗ ಯುವತಿಯ ಕೆನ್ನೆಗೆ ಹೊಡೆದಿದ್ದಾನೆ. ಯುವತಿ ಕಿರುಚಾಡಿದಾಗ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಪಂಜಾಬ್ | ಪತ್ನಿ, ಇಬ್ಬರು ಹೆಣ್ಣುಮಕ್ಕನ್ನು ಗುಂಡಿಕ್ಕಿ ಕೊಂದು, ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಘಟನೆ ಬಳಿಕ ಕೊತ್ತನೂರು ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾಳೆ. ದೂರಿನ ಅನ್ವಯ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತಲೆಮರಿಸಿಕೊಂಡಿರುವ ಕಾಮುಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕಾರವಾರ | ಮೊಸಳೆಗೆ ಆಹಾರ ಕೊಡ್ಬೇಡಿ ಎಂದಿದ್ದಕ್ಕೆ ಎಸಿಎಫ್ ಹತ್ಯೆ – ಕೊಲೆಗಾರನಿಗೆ 10 ವರ್ಷ ಜೈಲು

