ಬೆಳಗಾವಿ: ಗೋಕಾಕ್ (Gokak) ನೂತನ ಜಿಲ್ಲೆಗೆ ಆಗ್ರಹಿಸಿ ಎಲ್ಲರೊಂದಿಗೆ ಚರ್ಚಿಸಿ ನಿರಂತರ ಹೋರಾಟ ಕೈಗೊಳ್ಳಲಾಗುವುದು ಎಂದು ಗೋಕಾಕ್ ಜಿಲ್ಲಾ ರಚನಾ ಹೋರಾಟ ಚಾಲನಾ ಸಮಿತಿಯ ಅಧ್ಯಕ್ಷ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು (Muruga Rajendra Swamiji) ಹೇಳಿದರು.
ಗೋಕಾಕ್ ನಗರದಲ್ಲಿ ಜಿಲ್ಲಾ ರಚನಾ ಹೋರಾಟ ಚಾಲನಾ ಸಮಿತಿ, ವಕೀಲರ ಸಂಘ ಹಾಗೂ ನಗರದ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಪ್ರತಿಭಟನೆ ನಡೆಸಲಾಯಿತು. ಇದನ್ನೂ ಓದಿ: ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಗುಡ್‌ನ್ಯೂಸ್ – ಮೊದಲ ಬಾರಿಗೆ KSRTCಯಿಂದ ಶಬರಿಮಲೆಗೆ ವೋಲ್ವೋ ಬಸ್ ಸಂಚಾರ
ಕಳೆದ 4 ದಶಕಗಳಿಂದ ಗೋಕಾಕ್ ಜಿಲ್ಲಾ ಹೋರಾಟ ನಡೆಯುತ್ತಿದೆ. ಜಿಲ್ಲೆ ಮಾಡಲು ನಿರಂತರ ಹೋರಾಟಗಳನ್ನು ಮಾಡಿ ಸರ್ಕಾರಕ್ಕೆ ಮನವಿ ಸಲ್ಲಿಸಿ ಮನವರಿಕೆ ಮಾಡಿದರೂ ಅದು ಈಡೇರಿಲ್ಲ. ಮುಂಬರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸರ್ಕಾರದ ಮೇಲೆ ಒತ್ತಡ ಹಾಕಿ ಜಿಲ್ಲೆಯ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತಗೆದುಕೊಂಡು ಗೋಕಾಕ್ ನೂತನ ಜಿಲ್ಲಾ ಕೇಂದ್ರವನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಆಗ್ರಹಿಸಿದರು.