ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿರುವ ‘ನಿಖಿಲ್ ಎಲ್ಲಿದ್ದೀಯಪ್ಪ’ ಡೈಲಾಗ್‍ಗೆ ಈಗ ಫುಲ್ ಡಿಮ್ಯಾಂಡ್ ಆಗಿದೆ. ನಿಖಿಲ್ ಎಲ್ಲಿದ್ದೀಯಪ್ಪ ಸಿನಿಮಾ ಟೈಟಲ್‍ಗೆ ಈಗ ಭರ್ಜರಿ ಬೇಡಿಕೆಯಾಗಿದೆ.
ನಿಖಿಲ್ ಎಲ್ಲಿದ್ದೀಯಪ್ಪ ಶೀರ್ಷಿಕೆಗೆ ಚಲನಚಿತ್ರ ವಾಣಿಜ್ಯ ಮಂಡಳಿಗೆ ಸಾಕಷ್ಟು ಮಂದಿ ಅರ್ಜಿ ಸಲ್ಲಿಸುತ್ತಿದ್ದಾರೆ. ಇದರ ಜೊತೆಗೆ ಮಂಡ್ಯದ ಚುನಾವಣಾ ಕಣವೇ ಸಿನಿಮಾ ಕಥೆಯಾಗಿದ್ದು, “ಮಂಡ್ಯದ ಹೆಣ್ಣು”, “ಜೋಡೆತ್ತು”, “ಕಳ್ಳೆತ್ತು” ಟೈಟಲ್ ನೋಂದಣಿಗೂ ಫುಲ್ ಡಿಮ್ಯಾಂಡ್ ಶುರುವಾಗಿದೆ.
Advertisement
ನಿಖಿಲ್ ಎಲ್ಲಿದ್ದೀಯಪ್ಪ ಟೈಟಲ್ ನಲ್ಲಿ ಸಿನಿಮಾ ಮಾಡಲು ಹಲವರು ಪ್ಲಾನ್ ಮಾಡಿದ್ದಾರೆ. ಒಟ್ಟು 7 ರಿಂದ 8 ಚಿತ್ರತಂಡಗಳು ಟೈಟಲ್ ಕೊಡುವಂತೆ ಫಿಲಂ ಚೇಂಬರ್ ಗೆ ಮನವಿ ಮಾಡಿದೆ. ಆದರೆ ಇದೆಲ್ಲ ರಾಜಕೀಯಕ್ಕೆ ಸಂಬಂಧಿಸುವುದರಿಂದ ಚಲನಚಿತ್ರ ವಾಣಿಜ್ಯ ಮಂಡಳಿ ಈ ಟೈಟಲ್ ನೀಡಲು ನಿರಾಕರಿಸಿದೆ.
Advertisement
ಜಾಗ್ವಾರ್ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಕುಮಾರಸ್ವಾಮಿ ಅವರು ನಿಖಿಲ್ ಅವರನ್ನು ಉಲ್ಲೇಖಿಸಿ `ನಿಖಿಲ್ ಎಲ್ಲಿದ್ದೀಯಪ್ಪ’ ಎಂದು ಹೇಳಿದ್ದರು. ಆ ಬಳಿಕ ಈ ಡೈಲಾಗ್ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೂಪಗಳಲ್ಲಿ ಹರಿದಾಡುತ್ತಿದೆ.