ಚಿತ್ರದುರ್ಗ: ಪಹಣಿ ತಿದ್ದುಪಡಿಗೆ ಲಂಚಕ್ಕೆ (Bribe) ಬೇಡಿಕೆಯಿಟ್ಟಿದ್ದ ಎಫ್‌ಡಿಎ (FDA) ಓರ್ವ ಲೋಕಾಯುಕ್ತ (Lokayukta) ಅಧಿಕಾರಿಗಳ ಬಲೆಗೆ ಸಿಲುಕಿರುವ ಘಟನೆ ಚಿತ್ರದುರ್ಗದ (Chitradurga) ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕೆಲ್ಲೋಡು ಗ್ರಾಮದ ಹನುಮಂತಪ್ಪ ಎಂಬವರ ಬಳಿ ಎಫ್‌ಡಿಎ ಬಸವರಾಜ್, ಪಹಣಿ ತಿದ್ದುಪಡಿಗೆ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಕಚೇರಿಯಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಬಸವರಾಜ್‌ನನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಖೆಡ್ಡಾಗೆ ಬೀಳಿಸಿದ್ದಾರೆ. ಇದನ್ನೂ ಓದಿ: ಆನೇಕಲ್‌ನಲ್ಲಿ ಐದು ಅಕ್ರಮ ಕಂಟ್ರಿ ಮೇಡ್ ಪಿಸ್ತೂಲ್ ಪತ್ತೆ – 7 ಜನರ ವಿರುದ್ಧ ಕೋಕಾ ಕೇಸ್
ಲೋಕಾಯುಕ್ತ ಎಸ್ಪಿ ಕೌಲಾಪುರೆ ಹಾಗೂ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸದ್ಯ ಎಫ್‌ಡಿಎ ಬಸವರಾಜ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ದಾಖಲೆಗಳ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಬರದ ಬಗ್ಗೆ ಚರ್ಚೆಗೆ ಸಚಿವರ ʻಬರʼ; ಕಾಂಗ್ರೆಸ್ – ಬಿಜೆಪಿ ಮಧ್ಯೆ ತೀವ್ರ ಜಟಾಪಟಿ

