ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ವರ್ಷ ಬಾಕಿಯಿರುವಾಗಲೇ ಎಲೆಕ್ಷನ್ ಕಾವು ಶುರುವಾಗಿದೆ. ಪ್ರಮುಖ ರಾಷ್ಟ್ರೀಯ ಪಕ್ಷಗಳಾಗಿರುವ ಕಾಂಗ್ರೆಸ್ ಹಾಗೂ ಬಿಜೆಪಿ 150 ಸ್ಥಾನಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಭರದ ಸಿದ್ಧತೆ ನಡೆಸುತ್ತಿವೆ.
Advertisement
ಈಗಾಗಲೇ ಹಳೆ ಮೈಸೂರು ಭಾಗದಲ್ಲಿ ಆಪರೇಷನ್ ಕಮಲ ಸದ್ದು ಮಾಡುತ್ತಿದೆ. ರಾಜ್ಯ ಬಿಜೆಪಿ ನಾಯಕರು ಮೈಸೂರು, ಮಂಡ್ಯ, ತುಮಕೂರು, ಕೋಲಾರ, ಚಾಮರಾಜನಗರ, ರಾಮನಗರಲ್ಲಿ ಆಪರೇಷನ್ ಕಮಲಕ್ಕೆ ಪ್ಲಾನ್ ಮಾಡಿದ್ದಾರೆ. ಹಳೆ ಮೈಸೂರು ಭಾಗದ 89 ಕ್ಷೇತ್ರಗಳ ಪೈಕಿ (ಬೆಂಗಳೂರು 2 ಸೇರಿ 89) 10 ಕ್ಷೇತ್ರಗಳಲ್ಲಿ ಮಾತ್ರವೇ ಬಿಜೆಪಿ ಪ್ರಾಬಲ್ಯ ಹೊಂದಿದ್ದು, ಉಳಿದ 43 ಕ್ಷೇತ್ರಗಳಲ್ಲಿ ಪಕ್ಷ ಸುಧಾರಿಸಲು ಮುಂದಾಗಿದ್ದು, ಅದಕ್ಕಾಗಿ ಪ್ರತಿ ಪಕ್ಷದ ನಾಯಕರಿಗೆ ಆಮಿಷ ಒಡ್ಡಲಾಗುತ್ತಿದೆ ಎಂಬ ಮಾಹಿತಿಗಳು ಹೊರ ಬೀಳುತ್ತಿವೆ. ಇದನ್ನೂ ಓದಿ: ದೇಶದ ಸಮಗ್ರ ಅಭಿವೃದ್ಧಿಗೆ ಎನ್‍ಇಪಿ ಅವಶ್ಯಕ: ಅಶ್ವಥ್ ನಾರಾಯಣ
Advertisement
Advertisement
ಸಿದ್ದರಾಮಯ್ಯಗೆ 20 ಕ್ಷೇತ್ರಗಳಲ್ಲಿ ಬೇಡಿಕೆ: ಬಿಜೆಪಿ ಆಪರೇಷನ್ ಕಮಲ ಶುರು ಮಾಡುತ್ತಿದ್ದಂತೆಯೇ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಅವರು 20 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಬೇಡಿಕೆಯಿದೆ ಎಂಬ ಸ್ಪೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ: ತಾಕತ್ತಿದ್ದರೆ ನನ್ನ ವಿರುದ್ಧ ರೇವಣ್ಣ ನಿಲ್ಲಲಿ :ಪ್ರೀತಂ ಸವಾಲು
Advertisement
ಕಳೆದ ಬಾರಿ ಪ್ರತಿಷ್ಠೆಯ ಕಣವಾಗಿದ್ದ ಚಾಮುಂಡೇಶ್ವರಿ ಕ್ಷೇತ್ರ ಹಾಗೂ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರತಿಸ್ಪರ್ಧಿಯಾಗಿದ್ದ ಹಾಲಿ ಶಾಸಕ ಜಿ.ಟಿ.ದೇವೇಗೌಡರ ಎದುರು 36 ಸಾವಿರ ಮತಗಳ ಅಂತರದಿಂದ ಸೋತು ಮುಖಭಂಗ ಅನುಭವಿಸಿದ್ದರು. ಸುಮಾರು 1 ಲಕ್ಷ ಮತಗಳ ಅಂತರದಿಂದ ಗೆಲ್ಲುವುದಾಗಿ ಘೋಷಿಸಿದ್ದ ಬಾದಾಮಿ ಕ್ಷೇತ್ರದಲ್ಲಿ ಕೇವಲ 1696 ಮತಗಳ ಅಂತರದಿಂದ ಜಯಗಳಿಸಿದ್ದರು. ಇದರಿಂದ ಆರಂಭದ ಒಂದೂವರೆ ವರ್ಷ ಜೆಡಿಎಸ್‌ನೊಂದಿಗೆ ಮೈತ್ರಿ ಸರ್ಕಾರ ರಚಿಸಬೇಕಾದ ಅನಿವಾರ್ಯತೆ ಉಂಟಾಗಿತ್ತು.
ಇದೀಗ ಮತ್ತೆ ರಾಜ್ಯದಲ್ಲಿ ತನ್ನ ಪ್ರಾಬಲ್ಯ ಸ್ಥಾಪಿಸಲು ಕಾಂಗ್ರೆಸ್ ಮುಂದಾಗಿದೆ. ಪಕ್ಷಗಳು ತಳಮಟ್ಟದಿಂದ ಸಂಘಟನೆಯಲ್ಲಿ ತೊಡಗಿವೆ. ಈ ಬೆನ್ನಲ್ಲೇ ತಮಗೆ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬೇಡಿಕೆ ಇರುವುದಾಗಿ ಅವರು ಹೇಳಿದ್ದಾರೆ. ಪಶ್ಚಿಮ ಬಂಗಾಳದ ಮೇಲೂ ಬಿಜೆಪಿ ಇದೇ ರೀತಿ ನಿರೀಕ್ಷೆ ಇಟ್ಟುಕೊಂಡಿದ್ದರು, ಆದರೆ ಏನಾಯಿತು? ಇಲ್ಲೂ ಅದೇ ರೀತಿ ಹಿನ್ನಡೆಯಾಗಲಿದೆ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ. ಇದನ್ನೂ ಓದಿ: ಬೆಂ.ನ.ಜಿಲ್ಲೆಗೆ ಕೆ.ಸಿ.ವ್ಯಾಲಿ ನೀರು: ಒತ್ತುವರಿಯಾಗಿದ್ದ ರಾಜಕಾಲುವೆ, ಖಾಸಗಿ ಬಡಾವಣೆ ತೆರವು
ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನನಗೆ ಕ್ಷೇತ್ರ ಇಲ್ಲ ಅಂತಲ್ಲ. ಬಾದಾಮಿ ಇಲ್ವಾ? ಅಲ್ಲಿಂದಲೇ ಮತ್ತೆ ಸ್ಪರ್ಧಿಸಿದರೂ ಸ್ಪರ್ಧಿಸಬಹುದು. ಸುಮಾರು 20 ಕ್ಷೇತ್ರಗಳಲ್ಲಿ ಜನ ಕರೆಯುತ್ತಿದ್ದಾರೆ. ವರುಣಾ, ಚಾಮುಂಡೇಶ್ವರಿ, ಹುಣಸೂರು, ಹೆಬ್ಬಾಳ, ಚಾಮರಾಜಪೇಟೆ, ಕೋಲಾರ ಸೇರಿದಂತೆ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಕರೆಯುತ್ತಿದ್ದಾರೆ. ಚುನಾವಣೆಗೆ ತುಂಬಾ ದಿನ ಇದೆ. ಹತ್ತಿರ ಬಂದಾಗ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ವಿಶ್ವನಾಥ್ ಆಹ್ವಾನ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸಹ ಹುಣಸೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಅಹ್ವಾನ ನೀಡಿದ್ದಾರೆ. ಅಲ್ಲದೆ, ಸಿದ್ದರಾಮಯ್ಯ ಅವರ ಕೊಡುಗೆ ಅಪಾರವಾಗಿದೆ. ಅವರು ಸ್ಪರ್ಧಿಸಿದರೆ, ನಾವೇ ಗೆಲ್ಲಿಸುತ್ತೇವೆ ಎಂದು ಈಚೆಗಷ್ಟೇ ಹೇಳಿದ್ದರು.