ಉಡುಪಿ: ಉಡುಪಿಯ ಸರ್ಕಾರಿ ಪದವಿಪೂರ್ವ ಹೆಣ್ಣು ಮಕ್ಕಳ ಕಾಲೇಜಿನಲ್ಲಿ ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸಿ ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ.
ಉಡುಪಿಯ ಸರ್ಕಾರಿ ಪದವಿಪೂರ್ವ ಹೆಣ್ಣುಮಕ್ಕಳ ಕಾಲೇಜಿನಲ್ಲಿ ಹಿಜಾಬ್ ಧರಿಸಿಕೊಂಡು ತರಗತಿಯಲ್ಲಿ ಕುಳಿತುಕೊಳ್ಳುವ ಅವಕಾಶವನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ದೂರನ್ನು ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ತರಗತಿಯಲ್ಲಿ ಪ್ರವೇಶ ನೀಡುವುದಿಲ್ಲ ಎಂದು ಕಾಲೇಜಿನ ಪ್ರಾಂಶುಪಾಲ ರುದ್ರೇಗೌಡ ಸೂಚನೆ ನೀಡಿದ್ದರು. ಇದನ್ನೂ ಓದಿ: ದೇಗುಲಗಳನ್ನು ಭಕ್ತರ ಕೈಗೆ ನೀಡಬೇಕೆಂಬ ಚಿಂತನೆ ಇದೆ: ಕೋಟಾ
Advertisement
Advertisement
ಕೆಲವು ವಿದ್ಯಾರ್ಥಿನಿಯರು, ನಮಗೆ ಹಿಜಾಬ್ ಧರಿಸಿ ಕ್ಲಾಸ್‌ನಲ್ಲಿ ಕುಳಿತುಕೊಳ್ಳಲು ಬಿಡುತ್ತಿಲ್ಲ. ಪೋಷಕರು ಬಂದು ಮಾತನಾಡಿದರೂ ಸಮಸ್ಯೆ ಬಗೆಹರಿಯುತ್ತಿಲ್ಲ, ಇದರಿಂದ ನಮ್ಮ ಕಲಿಕೆಗೆ ತೊಂದರೆಯಾಗುತ್ತಿದೆ ಎಂದು ದೂರು ನೀಡಿದ್ದಾರೆ. ಇದನ್ನೂ ಓದಿ: 80 ಮೇಲ್ಪಟ್ಟ ವೃದ್ಧರು, ಅಂಗವಿಕಲರು ಮನೆಯಲ್ಲಿದ್ದೇ ವೋಟು ಹಾಕಬಹುದು: ಚುನಾವಣಾ ಆಯೋಗ
Advertisement
ಕಾಲೇಜಿನಲ್ಲಿ ಇಲ್ಲಿಯವರೆಗೆ ಹಿಜಾಬ್ ಧರಿಸಲು ಅವಕಾಶ ನೀಡಿಲ್ಲ. ಕಾಲೇಜಿನಲ್ಲಿ 60 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರಿದ್ದು, ಅವರಲ್ಲಿ ಕೆಲವರು ಕಳೆದ ಮೂರು ದಿನಗಳಿಂದ ಹಿಜಾಬ್ ಧರಿಸುತ್ತಿದ್ದಾರೆ. ನಾವು ಅವರ ಮನೆಯವರನ್ನು ಕರೆದು ಮಾತುಕತೆ ನಡೆಸಿದ್ದೇವೆ. ಮನೆಯವರು ಅರ್ಥ ಮಾಡಿಕೊಂಡು ಒಪ್ಪಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರು ಮಾಹಿತಿ ನೀಡಿದ್ದಾರೆ.