ಮಡಿಕೇರಿ: ರಾಜ್ಯದ ಲಿಂಗಾಯತ ಪಂಚಮಸಾಲಿ ಜನಾಂಗವನ್ನು ಹಿಂದುಳಿದ ವರ್ಗ 2ಎಗೆ ಸೇರಿಸಬೇಕೆಂಬ ಬೇಡಿಕೆಗೆ ಕೊಡಗಿನಲ್ಲಿ ವಿರೋಧ ವ್ಯಕ್ತವಾಗಿದೆ. ಸರ್ಕಾರದ ಆದೇಶದಂತೆ ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸಲು ರಾಜ್ಯ ಪ್ರವಾಸ ಕೈಗೊಂಡಿರುವ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ನೇತೃತ್ವದ ತಂಡ ಕೊಡಗು ಜಿಲ್ಲೆಗೆ ಆಗಮಿಸಿ, ಸಮುದಾಯದವರಿಂದ ವಿವರ ಬಯಸಿದ ಸಂದರ್ಭ ವೀರಶೈವಲಿಂಗಾಯತರು, ಪಂಚಮಸಾಲಿಗಳು ಎಂಬುದು ಯಾರು ಎನ್ನುವುದೇ ಗೊತ್ತಿಲ್ಲ. ಆದ್ದರಿಂದ ಮೀಸಲಾತಿ ನೀಡಿದರೆ ಎಲ್ಲಾ ವೀರಶೈವಲಿಂಗಾಯತರಿಗೂ ನೀಡಿ ಎಂದು ವೀರಶೈವಲಿಂಗಾಯತ ಸಂಘಟನೆ ಪ್ರಮುಖರು ಆಗ್ರಹಿಸಿದರು.
ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಕೂಗೆಕೋಡಿ ಹಾಗೂ ಕೊಡ್ಲಿಪೇಟೆಗೆ ತೆರಳಿದ ತಂಡ ಕೆಲವು ಮನೆಗಳಿಗೆ ತೆರಳಿ ಮಾಹಿತಿ ಸಂಗ್ರಹಿಸಿದರೆ ಮತ್ತೊಂದೆಡೆ ಸಾರ್ವಜನಿಕವಾಗಿ ಅಭಿಪ್ರಾಯ ಸಂಗ್ರಹಿಸಿದರು. ಕೊಡಗು ಜಿಲ್ಲೆಯಲ್ಲಿ ವೀರಶೈವ ಲಿಂಗಾಯತ ಬಿಟ್ಟರೆ ನಮಗೇನೂ ಗೊತ್ತಿಲ್ಲ. ಎಲ್ಲರೂ ಒಟ್ಟಾಗಿ, ಒಗ್ಗಟ್ಟಾಗಿ ಬದುಕುತ್ತಿದ್ದೇವೆ. ಆದರೆ ಕೆಲವರು ತಮ್ಮ ರಾಜಕೀಯಕ್ಕಾಗಿ ನಮ್ಮ ಸಮುದಾಯವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ರಾಜಸ್ಥಾನದಲ್ಲಿ ಮುಸ್ಲಿಂ ಏರಿಯಾಗಳಿಗೆ ದಿನದ 24 ಗಂಟೆ ನಿರಂತರ ವಿದ್ಯುತ್
ಪಂಚಮಸಾಲಿಗಳೆನ್ನುವವರು ಕೊಡಗಿನಲ್ಲಿ ಇಲ್ಲ. ಆದರೂ ಇದ್ದಾರೆ ಎಂಬ ತಪ್ಪು ಮಾಹಿತಿ ನೀಡಿದ್ದಾರೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ನಮ್ಮನ್ನು ಬಳಸಿಕೊಳ್ಳಬೇಡಿ. ಮೀಸಲಾತಿ ನೀಡುವುದಾದರೆ ಎಲ್ಲಾ ವೀರಶೈವಲಿಂಗಾಯತರಿಗೂ ನೀಡಿ. ಅದು ಬಿಟ್ಟು ಸಮುದಾಯ ಒಡೆದು ಮೀಸಲಾತಿ ನೀಡುವ ಅವಶ್ಯಕತೆ ಇಲ್ಲ ಎಂದರು. ಇದನ್ನೂ ಓದಿ: ಕಪ್ಪು ಹಣ ಸಿಕ್ಕರೆ, ನನ್ನ ಸಂಪೂರ್ಣ ಆಸ್ತಿಯನ್ನು ಬಿಜೆಪಿಗೆ ದಾನ ಮಾಡುತ್ತೇನೆ : ಸಂಜಯ್ ರಾವತ್
ಈ ಸಂದರ್ಭ ಮಾತನಾಡಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಸರ್ಕಾರದ ಆದೇಶದಂತೆ ನಾವು ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿನೀಡಿ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ನಿಮ್ಮ ಅಭಿಪ್ರಾಯಗಳನ್ನು ವರದಿಯ ರೂಪದಲ್ಲಿ ಸರ್ಕಾರಕ್ಕೆ ಸಲ್ಲಿಸುತ್ತೇವೆ. ಈ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕಿದೆ ಎಂದು ತಿಳಿಸಿದರು.