Connect with us

ವಿಶೇಷ ಚೇತನ ಮಕ್ಕಳ ಶಾಲೆಯ ನೆರವಿಗೆ ನಿಂತ ನಟ ಸುದೀಪ್

ವಿಶೇಷ ಚೇತನ ಮಕ್ಕಳ ಶಾಲೆಯ ನೆರವಿಗೆ ನಿಂತ ನಟ ಸುದೀಪ್

ಚಾಮರಾಜನಗರ: 40ಕ್ಕೂ ಹೆಚ್ಚು ಮಕ್ಕಳಿರುವ ಪೃಥ್ವಿ ವಿಶೇಷ ಚೇತನರ ಶಾಲೆಗೆ ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್ ಸಹಾಯವನ್ನು ಮಾಡಿದ್ದಾರೆ.

ಬುದ್ಧಿಮಾಂದ್ಯ ಶಾಲೆಯ ಮಕ್ಕಳಿರುವ ಕಟ್ಟಡ ಮಳೆ ಬಂದರೆ ಸೋರುತ್ತದೆ. ಲಾಕ್‍ಡೌನ್ ವೇಳೆ, ಆಹಾರಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದನ್ನು ಮನಗಂಡು ಸುದೀಪ್ ಟ್ರಸ್ಟ್ ನೆರವಿಗೆ ಧಾವಿಸಿದೆ. ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಈಗ ಗುಂಡ್ಲುಪೇಟೆಯಲ್ಲಿರುವ ಪೃಥ್ವಿ ವಿಶೇಷಚೇತನ ಮಕ್ಕಳ ಪಾಲಿಗೆ ಬೆಳಕಾಗುತ್ತಿದೆ. ಇದನ್ನೂ ಓದಿ: ಮಂಗಳಮುಖಿಯರಿಗೆ ಕಿಚ್ಚನ ನೆರವು

ಇಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ  ರಾಜ್ಯ ಮುಖಂಡ ರಮೇಶ್ ಕಿಟ್ಟಿ ಹಾಗೂ ಜಿಲ್ಲಾ ಮುಖಂಡರಾದ ಸೋಮ ನಾಯಕ, ಪರಶಿವ ಅವರ ತಂಡ ಶಾಲೆಗೆ ಭೇಟಿ ನೀಡಿತ್ತು. ಒಂದು ತಿಂಗಳಿಗಾಗುವಷ್ಟು ಆಹಾರದ ಕಿಟ್ ವಿತರಿಸಿ ವಸತಿ ಶಾಲೆಯ ಮೂಲಸೌಕರ್ಯ ಅಭಿವೃದ್ಧಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ:  ಮತ್ತು ಬರಿಸುವಂತಿದೆ ಶ್ರೀಲೀಲಾ ಫೋಟೋ ಶೂಟ್

ವಸತಿ ಶಾಲೆಯು ಬಾಡಿಗೆ ಕಟ್ಟಡದಲ್ಲಿದ್ದು ಅವಕಾಶ ಕೊಟ್ಟರೇ ಇದೇ ಕಟ್ಟಡವನ್ನು ದುರಸ್ತಿ ಮಾಡಿಸಲಾಗುವುದು. ಇಲ್ಲವೇ ಬೇರೆ ಕಟ್ಟಡ ನೋಡಿ ಶಾಲೆಯನ್ನು ಸ್ಥಳಂತಾರಿಸುವ ಕೆಲಸವನ್ನು ಚಾರಿಟೇಬಲ್ ಸೊಸೈಟಿ   ಮಾಡಲಿದೆ. ಜತೆಗೆ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಶಾಶ್ವತ ಪರಿಹಾರವೊಂದನ್ನು ಒದಗಿಸಲು ಚಿಂತನೆ ನಡೆದಿದೆ. ಪೃಥ್ವಿ ವಿಶೇಷ ಚೇತನರ ಶಾಲೆಯಲ್ಲಿ 40ಕ್ಕೂ ಹೆಚ್ಚು ಮಕ್ಕಳಿದ್ದಾರೆ. ಮಳೆ ಬಂದರೆ ಸೋರುವ ಕಟ್ಟಡದಲ್ಲಿ ವಾಸಿಸುತ್ತಿದ್ದಾರೆ. ಲಾಕ್‍ಡೌನ್ ವೇಳೆ, ಆಹಾರಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದನ್ನು ಮನಗಂಡು ಸುದೀಪ್ ಟ್ರಸ್ಟ್ ನೆರವಿಗೆ ಧಾವಿಸಿದೆ. ಇದನ್ನೂ ಓದಿ:ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ಕರೆದೊಯ್ದ ಪುತ್ರ ಯತೀಂದ್ರ

ಒಂದುಹೊತ್ತಿನ ಊಟಕ್ಕೂ ಕಷ್ಟ ಪಡುತ್ತಿದ್ದ ಮಂಗಳಮುಖಿಯರು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಗೆ ಕರೆ ಮಾಡಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ತಕ್ಷಣವೇ ನೆರವಿಗೆ ಬಂದ ಕಿಚ್ಚನ ಚಾರಿಟೇಬಲ್ ಸೊಸೈಟಿ, ಚಿತ್ರದುರ್ಗದ ಮಂಗಳಮುಖಿಯರ ಮನೆಗೆ ದಿನಸಿ ಕಿಟ್‍ಗಳನ್ನು ವಿತರಿಸಿದ್ದಾರೆ.

Advertisement
Advertisement