ಶ್ರೀನಗರ: ಹಿರಿಯ ರಾಜಕೀಯ ಮುಖಂಡ, ಜಮ್ಮು ಮತ್ತು ಕಾಶ್ಮೀರದ (Jammu And Kashmir) ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ (Ghulam Nabi Azad) ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ. ‘ಡೆಮಾಕ್ರಟಿಕ್ ಆಜಾದ್ ಪಾರ್ಟಿ’ (Democratic Azad Party) ಹೆಸರಿನ ಪಕ್ಷವನ್ನು ಘೋಷಣೆ ಮಾಡಿ ಅದರ ಧ್ವಜವನ್ನು ಇಂದು ಬಿಡುಗಡೆ ಮಾಡಿದ್ದಾರೆ.
Advertisement
ಜಮ್ಮುವಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷದ ಸಿದ್ಧಾಂತವು ಅವರ ಹೆಸರಿನಂತೆ ಇರುತ್ತದೆ. ಇಲ್ಲಿ ಎಲ್ಲಾ ಜಾತ್ಯತೀತ ಜನರು ಸೇರಬಹುದು ಎಂದು ಪಕ್ಷದ ಕಾರ್ಯಸೂಚಿಯನ್ನು ಸ್ಪಷ್ಟಪಡಿಸಿದ್ದರು. ಹೊಸ ಪಕ್ಷ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಪೂರ್ಣ ರಾಜ್ಯತ್ವವನ್ನು ಮರುಸ್ಥಾಪಿಸುವುದು, ಸ್ಥಳೀಯ ಜನರಿಗೆ ಭೂಮಿ ಮತ್ತು ಉದ್ಯೋಗದ ಹಕ್ಕುಗಳನ್ನು ಪಡೆಯಲು ಹೋರಾಟವನ್ನು ಮುಂದುವರಿಸುವುದನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಮ್ಮನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ: ಅಮೆರಿಕಗೆ ನೇರವಾಗಿ ಜೈಶಂಕರ್ ತಿರುಗೇಟು
Advertisement
Advertisement
ತಮ್ಮ ಧ್ವಜದಲ್ಲಿರುವ ಹಳದಿ ಬಣ್ಣವು ಸೃಜನಶೀಲತೆ ಮತ್ತು ವೈವಿಧ್ಯತೆಯಲ್ಲಿ ಏಕತೆಯನ್ನು ಸೂಚಿಸುತ್ತದೆ. ಬಿಳಿ ಶಾಂತಿಯನ್ನು ಸೂಚಿಸುತ್ತದೆ ಮತ್ತು ನೀಲಿ ಸ್ವಾತಂತ್ರ್ಯ, ಮುಕ್ತ ಸ್ಥಳ, ಕಲ್ಪನೆ ಮತ್ತು ಸಮುದ್ರದ ಆಳದಿಂದ ಆಕಾಶದ ಎತ್ತರದವರೆಗಿನ ಮಿತಿಗಳನ್ನು ಸೂಚಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೇಶದ ಬಹುದೊಡ್ಡ ಭಯೋತ್ಪಾದಕ ಸಂಘಟನೆ RSS : ಭಾಸ್ಕರ್ ಪ್ರಸಾದ್
Advertisement
ಕಳೆದ ಅಗಸ್ಟ್ 26 ರಂದು ಕಾಂಗ್ರೆಸ್ (Congress) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಗುಲಾಂ ನಬಿ ಆಜಾದ್ ಐದು ದಶಕಕ್ಕೂ ಹೆಚ್ಚಿನ ಹಳೆಯ ಸಂಬಂಧವನ್ನು ಕಡಿದುಕೊಂಡಿದ್ದರು. ರಾಜೀನಾಮೆ ಬಳಿಕ ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷವನ್ನು ಸ್ಥಾಪಿಸುವುದಾಗಿ ಹೇಳಿದ್ದರು. ಅಂತೆಯೇ ಇಂದು ಹೊಸ ಪಕ್ಷದ ಹೆಸರನ್ನು ಘೋಷಿಸಿದ್ದಾರೆ.