ಡೆಹ್ರಾಡೂನ್: ಮುಳುಗಡೆಯಾಗುತ್ತಿರುವ ಪಟ್ಟಣ ಎಂದೇ ಕರೆಸಿಕೊಳ್ಳುತ್ತಿರುವ ಉತ್ತರಾಖಂಡದ (Uttarakhand) ಜೋಶಿಮಠದಲ್ಲಿ (Joshimath) ತೀವ್ರವಾಗಿ ಬಿರುಕುಬಿಟ್ಟಿರುವ ಹಾಗೂ ಅಪಾಯದ ಸ್ಥಿತಿಯಲ್ಲಿರುವ ಕಟ್ಟಡಗಳನ್ನು ನೆಲಸಮಗೊಳಿಸುವ (Demolition) ಕಾರ್ಯ ಮಂಗಳವಾರದಿಂದ ಪ್ರಾರಂಭವಾಗಿದೆ.
Advertisement
ಉತ್ತರಾಖಂಡದ ಜೋಶಿಮಠದಲ್ಲಿ ಎಲ್ಲೆಡೆ ಭೂಕುಸಿತಗಳು ಉಂಟಾಗುತ್ತಿದ್ದು, ಕಟ್ಟಡಗಳು ಬಿರುಕು ಬಿಡುತ್ತಿವೆ. ರಸ್ತೆಗಳಲ್ಲಿಯೂ ತೀವ್ರ ಸ್ವರೂಪದ ಬಿರುಕುಗಳು ಕಾಣಿಸಿಕೊಳ್ಳುತ್ತಿವೆ. ಕ್ಷಣ ಕ್ಷಣಕ್ಕೂ ಅಲ್ಲಿನ ಜನರು ನಗರ ಮುಳುಗಡೆಯ (Joshimath Sinking) ಭೀತಿಯಲ್ಲಿ ದಿನದೂಡುತ್ತಿದ್ದಾರೆ.
Advertisement
Advertisement
ಈಗಾಗಲೇ ನಗರದ ಸುಮಾರು 670 ಮನೆಗಳು ಬಿರುಕುಬಿಟ್ಟಿದ್ದು, ಅವುಗಳಲ್ಲಿ ಹೆಚ್ಚಿನವುಗಳನ್ನು ನೆಲಸಮಗೊಳಿಸಲು ನಿರ್ಧರಿಸಲಾಗಿದೆ. ನೆಲಸಮಗೊಳಿಸುವಂತಹ ಕಟ್ಟಡಗಳಿಗೆ ಈಗಾಗಲೇ ಕೆಂಪು ಬಣ್ಣದ ಗುರುತುಗಳನ್ನು ಮಾಡಲಾಗಿದೆ.
Advertisement
ನಗರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿವಾಸಿಗಳನ್ನು ತಾತ್ಕಾಲಿಕ ಆಶ್ರಯಗಳಿಗೆ ಕಳುಹಿಸಲಾಗುತ್ತಿದೆ. ಈಗಾಗಲೇ 678 ಕಟ್ಟಡಗಳನ್ನು ಅಸುರಕ್ಷಿತ ಎಂದು ಗುರುತಿಸಲಾಗಿದ್ದು, ಅವುಗಳನ್ನು ತೆರವುಗೊಳಿಸಲು ಪ್ರಾರಂಭಿಸಲಾಗಿದೆ. 81 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಅಗತ್ಯವಿರುವಂತಹ ಕೆಲವು ಪ್ರದೇಶಗಳನ್ನು ಸೀಲ್ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮೆಟ್ರೋ ಪಿಲ್ಲರ್ ಕುಸಿತ – ಮೃತ ಕುಟುಂಬಕ್ಕೆ 20 ಲಕ್ಷ ಪರಿಹಾರ : BMRC
ಜೋಶಿಮಠವನ್ನು ಈಗಾಗಲೇ ವಿಪತ್ತು ಪೀಡಿತ ವಲಯವೆಂದು ಘೋಷಿಸಲಾಗಿದೆ. ಜೋಶಿಮಠ ಮತ್ತು ಸಮೀಪದ ಪ್ರದೇಶಗಳಲ್ಲಿ ನಿರ್ಮಾಣ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಜೋಶಿಮಠದ ಶೇ.30 ರಷ್ಟು ಹಾನಿಯಾಗಿದೆ ಎಂದು ವರದಿಯಾಗಿದೆ. ತಜ್ಞರ ಸಮಿತಿಯಿಂದ ವರದಿಯನ್ನು ಸಂಗ್ರಹಿಸಲಾಗುತ್ತಿದೆ. ಅದನ್ನು ಪ್ರಧಾನ ಮಂತ್ರಿ ಕಚೇರಿಗೆ ಸಲ್ಲಿಸಲಾಗುವುದು ಎಂದು ಅಕಾರಿಯೊಬ್ಬರು ತಿಳಿಸಿದ್ದಾರೆ.
ಸಂತ್ರಸ್ತರ ರಕ್ಷಣೆ ಹಾಗೂ ಜೋಶಿಮಠವನ್ನು ಉಳಿಸುವ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮನವಿ ಮಾಡಿಕೊಂಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೇಂದ್ರ ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಈಗಾಗಲೇ ಘೋಷಿಸಿದ್ದಾರೆ. ಇದನ್ನೂ ಓದಿ: ಪೆರುವಿನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ – ಭದ್ರತಾ ಪಡೆ ಗುಂಡೇಟಿಗೆ 12 ಬಲಿ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k