ನವದೆಹಲಿ: ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ನಡೆಸಿದ ಪ್ರತಿಭಟನೆ ವೇಳೆ ಗಲಭೆ ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶ ಸರ್ಕಾರ ನಡೆಸುತ್ತಿರುವ ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಉತ್ತರ ಪ್ರದೇಶದಲ್ಲಿ ಬುಲ್ಡೋಜರ್ ಕಾರ್ಯಾಚರಣೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಗುರುವಾರ ನಡೆಸಲಾಯಿತು. ವಿಚಾರಣೆ ಬಳಿಕ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ನೋಟಿಸ್ ನೀಡಿದ್ದು, 3 ದಿನದಲ್ಲಿ ಉತ್ತರಿಸುವಂತೆ ಸೂಚನೆ ನೀಡಿದೆ. ಆದರೆ ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ನೀಡಲು ನಿರಾಕರಿಸಿದೆ. ಇದನ್ನೂ ಓದಿ: ಯುಪಿಯಲ್ಲಿ ಬುಲ್ಡೋಜರ್ ಘರ್ಜನೆ- ಇಂದು ಸುಪ್ರೀಂ ಕೋರ್ಟ್ ವಿಚಾರಣೆ
Advertisement
Advertisement
ಅನಧಿಕೃತ ಕಟ್ಟಡಗಳ ತೆರವಿಗೆ ತಡೆ ನೀಡಲು ಸಾಧ್ಯವಿಲ್ಲ. ಆದರೆ ತೆರವಿಗೆ ಮುನ್ನ ಕಟ್ಟಡಗಳ ದಾಖಲೆಗೆ ಪರಿಶೀಲಿಸಬೇಕು. ಕಾನೂನಿನ ಅನುಸಾರವಾಗಿ ಕ್ರಮಕೈಗೊಳ್ಳುವಂತೆ ಸೂಚಿಸಬಹುದಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕಟ್ಟಡದ ಅನಧಿಕೃತ, ಅಧಿಕೃತದ ಬಗ್ಗೆ ಖಚಿತಪಡಿಸಿಕೊಳ್ಳಲು ಕೋರ್ಟ್ ಅಧಿಕಾರಿಗಳಿಗೆ ಸೂಚನೆ ನೀಡಿದೆ.
Advertisement
ಎಲ್ಲವೂ ನ್ಯಾಯಯುತವಾಗಿರಬೇಕು. ಅಧಿಕಾರಿಗಳು ಕಾನೂನಿನ ಪ್ರಕಾರ ಮಾತ್ರ ಕಾರ್ಯನಿರ್ವಹಿಸಬೇಕೆಂದು ನಾವು ನಿರೀಕ್ಷಿಸುತ್ತೇವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಿ ಎಂದು ಕೋರ್ಟ್ ತಿಳಿಸಿದೆ. ಇದನ್ನೂ ಓದಿ: ‘ಅಗ್ನಿಪಥ್’ ಯೋಜನೆ ವಿರೋಧಿಸಿ ತೀವ್ರ ಪ್ರತಿಭಟನೆ – ರೈಲಿಗೆ ಬೆಂಕಿ
Advertisement
ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ಕೋರಿ ಜಮಾಯತ್ ಉಲಮಾ ಐ ಹಿಂದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಮನೆಗಳ ಧ್ವಂಸಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಕೋರಿತ್ತು.