ನವದೆಹಲಿ: 2,000 ರೂಪಾಯಿ ನೋಟುಗಳನ್ನು ಹಿಂಪಡೆಯುವುದರಿಂದ ಆರ್ಥಿಕತೆಯ ಮೇಲೆ ಯಾವುದೇ ನಕಾರಾತ್ಮಕ ಪರಿಣಾಮ ಬೀರುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಗವರ್ನರ್ ಶಕ್ತಿಕಾಂತ್ ದಾಸ್ (Shaktikanta Das) ಹೇಳಿದ್ದಾರೆ.
ಖಾಸಗಿ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, 2,000 ರೂಪಾಯಿ ನೋಟು ಆರ್ಥಿಕತೆಯ ಮೇಲೆ ಯಾವುದೇ ಋಣಾತ್ಮಕ ಪರಿಣಾಮ ಬೀರುವುದಿಲ್ಲ. ಈಗಾಗಲೇ ಮೂರನೇ ಎರಡರಷ್ಟು ಗುಲಾಬಿ ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಠೇವಣಿ ಮಾಡಲಾಗಿದೆ ಅಥವಾ ವಿನಿಮಯ ಮಾಡಲಾಗಿದೆ ಎಂದರು. ಇದನ್ನೂ ಓದಿ: ವಿದೇಶ ಪ್ರವಾಸದಿಂದ ವಾಪಸ್ಸಾಗ್ತಿದ್ದಂತೆ ಮೋದಿ ಮಹತ್ವದ ಸಭೆ
Advertisement
Advertisement
ವಾಸ್ತವವಾಗಿ 2,000 ರೂ. ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದರಿಂದ ಬ್ಯಾಂಕಿಂಗ್ ವ್ಯವಸ್ಥೆ ಮತ್ತು ವಿಶಾಲ ಆರ್ಥಿಕತೆಗೆ ಪ್ರಯೋಜನವಾಗಬಹುದು ಎಂದು ಎಸ್‌ಬಿಐ (SBI) ವರದಿ ಹೇಳಿದೆ. 2,000 ರೂ. ನೋಟುಗಳ ವಿನಿಮಯಕ್ಕೆ 2023ರ ಸೆಪ್ಟೆಂಬರ್ 30ರವರೆಗೆ ಗಡುವು ನಿಗದಿಪಡಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರಸ್ತೆಯ ಮೇಲಲ್ಲ, ಕೋರ್ಟ್‍ನಲ್ಲಿ ಹೋರಾಟ ಮುಂದುವರೆಯಲಿದೆ – ಸಿಂಗ್‍ಗೆ ಕುಸ್ತಿಪಟುಗಳ ಎಚ್ಚರಿಕೆ
Advertisement
Advertisement
ಹಣದುಬ್ಬರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಣದುಬ್ಬರ ನಿಯಂತ್ರಣಕ್ಕೆ ಆರ್‌ಬಿಐ ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿದೆ. ಇದರ ಪರಿಣಾಮವಾಗಿ ಭಾರತದಲ್ಲಿ ಹಣದುಬ್ಬರ ಪ್ರಮಾಣ 5% ಕಡಿತವಾಗಿದ್ದುದ್ದು ನಿಯಂತ್ರಣದಲ್ಲಿದೆ ಎಂದರು. ಭಾರತೀಯ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ಅನಿಶ್ಚಿತತೆಗಳಾಗಿವೆ ಮತ್ತು ಆರ್‌ಬಿಐ ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸಬೇಕಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮುಸ್ಲಿಂ ರಾಷ್ಟ್ರಗಳ ಮೇಲೆ ಬಾಂಬ್ ದಾಳಿ ನಡೆಸಿದವರು ರಕ್ಷಣೆ ಬಗ್ಗೆ ಮಾತಾಡೋದು ಹಾಸ್ಯಾಸ್ಪದ – ನಿರ್ಮಲಾ ಸೀತಾರಾಮನ್