ನವದೆಹಲಿ: ಸಾರ್ವಜನಿಕ ಸ್ವಾಮ್ಯದ ದೇನಾ ಬ್ಯಾಂಕ್, ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್‍ಗಳನ್ನು ವಿಲೀನಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ವಿಲೀನಗೊಳ್ಳುವ ಮೂಲಕ ದೇಶದ ಮೂರನೇ ಅತಿ ದೊಡ್ಡ ಬ್ಯಾಂಕ್ ಆಗಿ ಹೊರಹೊಮ್ಮಲಿದೆ.
ಹಣಕಾಸು ಸಚಿವ ಅರುಣ್ ಜೇಟ್ಲಿ ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಬ್ಯಾಂಕ್ ಗಳ ವಿಲೀನ ಪ್ರಕ್ರಿಯೆಯನ್ನು ಬಜೆಟ್ ನಲ್ಲಿ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ದೇನಾ ಬ್ಯಾಂಕ್, ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ ಗಳ ವಿಲೀನವಾಗಲಿದೆ. ಇರುವ ಸಿಬ್ಬಂದಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಹೇಳಿದರು.
Advertisement
ಪ್ರಸ್ತುತ ದೇಶದಲ್ಲಿ ಅತಿ ದೊಡ್ಡ ಬ್ಯಾಂಕ್ ಗಳ ಪೈಕಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೊದಲ ಸ್ಥಾನದಲ್ಲಿದೆ. ಖಾಸಗಿ ಬ್ಯಾಂಕ್ ಗಳ ಪೈಕಿ ಎಚ್‍ಡಿಎಫ್‍ಸಿ ಮತ್ತು ಐಸಿಐಸಿಐ ಬ್ಯಾಂಕ್ ಮುಂಚೂಣಿಯಲ್ಲಿದೆ.
Advertisement
Advertisement
ವಿಲೀನ ಯಾಕೆ?
ವಿಶ್ವದ ಟಾಪ್ 50 ಪಟ್ಟಿಯಲ್ಲಿ ಭಾರತದ ಯಾವೊಂದು ಬ್ಯಾಂಕ್ ಸ್ಥಾನ ಪಡೆದಿಲ್ಲ. ಹೀಗಾಗಿ ಸಾರ್ವಜನಿಕ ವಲಯದಲ್ಲಿರುವ 21 ಬ್ಯಾಂಕ್ ಗಳನ್ನು 12ಕ್ಕೆ ಇಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಮತ್ತೊಂದು ಬ್ಯಾಂಕ್ ಗಳ ವಿಲೀನ ಪ್ರಕ್ರಿಯೆ ನಡೆಯಲಿದೆ.
Advertisement
ಈ ಹಿಂದೆ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು(ಎಸ್‍ಬಿಎಂ), ಸ್ಟೇಟ್ ಬ್ಯಾಂಕ್ ಆಫ್ ಬಿಕಾನೇರ್ ಹಾಗೂ ಜೈಪುರ್ (ಎಎಸ್‍ಬಿಜೆ), ಸ್ಟೇಟ್ ಬ್ಯಾಂಕ್ ಆಫ್ ಟ್ರಾವಂಕೂರ್(ಎಸ್‍ಟಿ), ಸ್ಟೇಟ್ ಬ್ಯಾಂಕ್ ಪಟಿಯಾಲಾ (ಎಎಸ್‍ಬಿಪಿ), ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ (ಎಎಸ್‍ಬಿಎಚ್)ಹಾಗೂ ಭಾರತೀಯ ಮಹಿಳಾ ಬ್ಯಾಂಕ್ (ಬಿಬಿಎಂ)ಗಳು ಎಸ್‍ಬಿಐ ಜೊತೆ 2017ರ ಏಪ್ರಿಲ್ 1ರಂದು ವಿಲೀನವಾಗಿತ್ತು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಜೊತೆ 5 ಬ್ಯಾಂಕ್ ಗಳು ವಿಲೀನ ಪ್ರಕ್ರಿಯೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಮತ್ತಷ್ಟು ಬ್ಯಾಂಕ್ ಗಳನ್ನು ವಿಲೀನಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಈ ಹಿಂದೆಯೇ ವರದಿಯಾಗಿತ್ತು.
The amalgamation will increase the banking operations; no employee will face any service condition adverse to present conditions: Union Finance Minister @arunjaitley pic.twitter.com/ADeJq727zK
— PIB India (@PIB_India) September 17, 2018
Alternative Mechanism under FM suggests @bankofbaroda, @VijayaBankIndia & @dena_bank to consider amalgamation; to create India’s 3rd largest globally competitive Bank @PMOIndia @FinMinIndia @PIB_India @DDNational @DDNewsLive pic.twitter.com/yGGtsN2eCA
— Rajiv kumar (@rajivkumarec) September 17, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv