ಮುಂಬೈ: ಬ್ಯಾಂಕ್ ಆಫ್ ಬರೋಡಾದಲ್ಲಿ ಏಪ್ರಿಲ್ 1ರಂದು ದೇನಾ ಮತ್ತು ವಿಜಯಾ ಬ್ಯಾಂಕ್‍ಗಳು ವಿಲೀನಗೊಳ್ಳಲಿವೆ. ಈ ಎರಡು ಬ್ಯಾಂಕ್‍ಗಳಲ್ಲಿರುವ ಖಾತೆಗಳು ಬ್ಯಾಂಕ್ ಆಫ್ ಬರೋಡಾಗೆ ವರ್ಗಾವಣೆಗೊಳ್ಳಲಿವೆ. ಈ ಎರಡು ಬ್ಯಾಂಕ್‍ಗಳ ವಿಲೀನದಿಂದಾಗಿ ದೇಶದ ಮೂರನೇ ಅತಿದೊಡ್ಡ ಬ್ಯಾಂಕ್ ಆಗಲಿದೆ.
ಪಸ್ತುತ 45.85 ಲಕ್ಷ ಕೋಟಿ ಮೌಲ್ಯದ ವ್ಯವಹಾರಗಳೊಂದಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೊದಲ ಸ್ಥಾನದಲ್ಲಿದೆ. 15.8 ಲಕ್ಷ ಕೋಟಿ ವ್ಯವಹಾರಗಳೊಂದಿಗೆ ಎಚ್‍ಡಿಎಫ್‍ಸಿ ಎರಡನೇ ಸ್ಥಾನದಲ್ಲಿ, 11.02 ಲಕ್ಷ ಕೋಟಿ ವ್ಯವಹಾರಗಳೊಂದಿಗೆ ಐಸಿಐಸಿಐ ಮೂರನೇ ಸ್ಥಾನದಲ್ಲಿವೆ. ದೇನಾ ಮತ್ತು ವಿಜಯಾ ಬ್ಯಾಂಕ್‍ಗಳ ವಿಲೀನದಿಂದಾಗಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರದ ಮೌಲ್ಯ 15.4 ಲಕ್ಷ ಕೋಟಿ ಆಗಲಿದೆ. ಐಸಿಐಸಿಐ ಬ್ಯಾಂಕ್ ನ್ನು ಹಿಂದೆ ತಳ್ಳಿ ಬ್ಯಾಂಕ್ ಆಫ್ ಬರೋಡಾ ಮೂರನೇ ಸ್ಥಾನವನ್ನ ಅಲಂಕರಿಸಲಿದೆ.
ದೇನಾ, ವಿಜಯ ಬ್ಯಾಂಕ್ ಗ್ರಾಹಕರು ಏನು ಮಾಡಬೇಕು?
1. ಗ್ರಾಹಕರಿಗೆ ಹೊಸ ಖಾತೆಯ ಸಂಖ್ಯೆ ಮತ್ತು ಕಸ್ಟಮರ್ ಐಡಿ ಸಿಗಲಿದೆ.
2. ದೇನಾ ಮತ್ತು ವಿಜಯಾ ಬ್ಯಾಂಕ್ ಗ್ರಾಹಕರೆಲ್ಲರಿಗೂ ಹೊಸ ಖಾತೆ ನಂಬರ್ ದೊರೆತ ಕೂಡಲೇ, ಆದಾಯ ತೆರಿಗೆ ಇಲಾಖೆ, ವಿಮೆ, ಪಿಂಚಣಿಗಳಿಗೆ ಮಾಹಿತಿಯನ್ನು ನೀಡಬೇಕು.
3. ಸಾಲಗಾರರು ಅಥವಾ ಇಎಂಐ ಗ್ರಾಹಕರು ಹೊಸ ಅರ್ಜಿಯನ್ನು ಭರ್ತಿ ಮಾಡಿ, ಸಂಬಂಧಪಟ್ಟ ದಾಖಲೆಗಳನ್ನು ಬ್ಯಾಂಕಿಗೆ ಸಲ್ಲಿಸಬೇಕು.
4. ಬ್ಯಾಂಕ್ ಆಫ್ ಬರೋಡಾಗೆ ಸೇರ್ಪಡೆಯಾಗುವ ಎಲ್ಲ ಗ್ರಾಹಕರಿಗೆ ಹೊಸ ಡೆಬಿಟ್ ಕಾರ್ಡ್, ಚೆಕ್‍ಬುಕ್ ಮತ್ತು ಕ್ರೆಡಿಟ್ ಕಾರ್ಟ್ ನೀಡಲಾಗುತ್ತದೆ.
6. ವಾಹನಗಳ ಮೇಲಿನ ಸಾಲ, ಗೃಹ ಸಾಲ, ವೈಯಕ್ತಿಕ ಸಾಲ ಪಡೆದ ಗ್ರಾಹಕರು ಪಾವತಿಸುತ್ತಿರುವ ಬಡ್ಡಿ ಮೊತ್ತದಲ್ಲಿ ಯಾವುದೇ ಬದಲಾವಣೆಗಳಿಲ್ಲ.
7. ಬ್ಯಾಂಕ್‍ಗಳ ವಿಲೀನದಿಂದಗ ಕೆಲ ಶಾಖೆಗಳು ಬಂದ್ ಆಗಲಿವೆ. ಹಾಗಾಗಿ ಗ್ರಾಹಕರು ಸಮೀಪದ ಬ್ಯಾಂಕ್ ಬರೋಡಾ ಬ್ಯಾಂಕ್ ಸಂಪರ್ಕಿಸಬೇಕು.
ಈ ಮೊದಲು ಸ್ಟೇಟ್ ಬ್ಯಾಂಕ್ ಆಫ್ ಜೈಪುರ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಸ್ಟೇಟ್ ಬ್ಯಾಂಕ್ ಆಫ್ ತ್ರವಾಂಕೋರ್, ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಪಟಿಯಾಲಾ ಬ್ಯಾಂಕ್‍ಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿಲೀನಗೊಳಿಸಲಾಗಿತ್ತು.