ಬೆಂಗಳೂರು: ಡೆಡ್ಲಿ ಡೆಂಗ್ಯೂ ಪ್ರಕರಣಗಳು (Dengue Cases) ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸೋಮವಾರ (ಜು.8) 197 ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 7,362ಕ್ಕೆ ಏರಿಕೆಯಾಗಿದೆ.
7,362 ಪ್ರಕರಣಗಳಲ್ಲಿ 303 ಸಕ್ರೀಯ ಪ್ರಕರಣಗಳಿವೆ. ಡೆಂಗ್ಯೂ ಜ್ವರಕ್ಕೆ ಸೋಮವಾರವೂ ಓರ್ವ ವ್ಯಕ್ತಿ ಬಲಿಯಾಗಿದ್ದು, ಒಟ್ಟು ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಈ ಪೈಕಿ ಹಾಸನದಲ್ಲಿ 2, ಮೈಸೂರು, ಹಾವೇರಿ, ಧಾರವಾಡ, ಶಿವಮೊಗ್ಗ ಹಾಗೂ ಬೆಂಗಳೂರಲ್ಲಿ ತಲಾ ಒಂದೊಂದು ಮರಣ ಕೇಸ್ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ (Health Department) ಮಾಹಿತಿ ನೀಡಿದೆ.
Advertisement
Advertisement
ಏನಿದು ಡೆಂಗ್ಯೂ?
ಇದೊಂದು ವೈರಸ್.
Advertisement
ಯಾವುದರಿಂದ ಹರಡುತ್ತೆ?
ಈಡಿಸ್ ಈಜಿಪ್ಟಿ ಹೆಣ್ಣು ಸೊಳ್ಳೆ (Idis Aegypti Mosquito).
Advertisement
ಡೆಂಗ್ಯೂ ವೈರಸ್ ಮೂಲ ಯಾವುದು?
ಡೆಂಗ್ಯೂ ತರಹದ ಕಾಯಿಲೆಯು ಮೊದಲು ಚೀನಾದಲ್ಲಿ ಜಿನ್ ರಾಜವಂಶದಿಂದ (265-420 ಶತಮಾನ) ಬಂದಿದೆ. 17 ನೇ ಶತಮಾನದಲ್ಲಿ ಡೆಂಗ್ಯೂಗೆ ಹೋಲುವ ಸಾಂಕ್ರಾಮಿಕ ರೋಗಗಳು ಸಂಭವಿಸಿದವು ಎಂಬುದಕ್ಕೆ ಪುರಾವೆಗಳಿವೆ.
ಡೆಂಗ್ಯೂ ರೋಗ ಬರುವುದು ಹೇಗೆ?
ಸೊಳ್ಳೆ ಕಡಿತದಿಂದ ಡೆಂಗ್ಯೂ ರೋಗ ಬರುತ್ತದೆ. ಈಡಿಸ್ ಈಜಿಪ್ಟಿ ಹೆಣ್ಣು ಸೊಳ್ಳೆ ಕಡಿತದಿಂದ ಡೆಂಗ್ಯೂ ವೈರಸ್ ಸೋಂಕು ಹರಡುತ್ತದೆ.
ಸೋಂಕಿನ ಪರಿಣಾಮವೇನು?
ರಕ್ತನಾಳಗಳಿಗೆ ಡೆಂಗ್ಯೂ ವೈರಸ್ ಹಾನಿಯುಂಟು ಮಾಡುತ್ತದೆ. ರಕ್ತಕಣಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತದೆ. ಪರಿಣಾಮವಾಗಿ ಅಂಗಾಂಗ ವೈಫಲ್ಯವಾಗುತ್ತದೆ. ಕೆಲವೊಮ್ಮೆ ಜೀವಕ್ಕೂ ಸಂಚಕಾರ ತರಬಹುದು.
ರೋಗ ಲಕ್ಷಣಗಳೇನು?
ಜ್ವರ, ತಲೆನೋವು, ವಾಂತಿ, ಕಣ್ಣು ಊದಿಕೊಂಡು ನೋವು ಉಂಟಾಗುವುದು, ಕೈ-ಕಾಲುಗಳಲ್ಲಿ ಸೆಳೆತ, ನೋವು, ಆಯಾಸ.
ಡೆಂಗ್ಯೂ ತಡೆಗಟ್ಟುವುದು ಹೇಗೆ?
* ಸೊಳ್ಳೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು
* ನೀರು ಶೇಖರಣೆಯಾಗುವ ಯಾವುದೇ ಪ್ರದೇಶವಿದ್ದರೂ ಶುಚಿಗೊಳಿಸಬೇಕು
* ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು
* ಸರಾಗವಾಗಿ ನೀರು ಹರಿಯುವಂತೆ ಚರಂಡಿ, ಮೋರಿಗಳನ್ನು ಸುಸ್ಥಿತಿಯಲ್ಲಿಡಬೇಕು
* ಮನೆ, ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು
* ಸೊಳ್ಳೆ ನಿವಾರಕ ಬಳಕೆ ಮಾಡಬೇಕು
ಚಿಕಿತ್ಸಾ ಕ್ರಮ ಏನು?
ಆರಂಭಿಕ ಹಂತದಲ್ಲಿ ಡೆಂಗ್ಯೂ ಜ್ವರದ ಲಕ್ಷಣ ಕಾಣಿಸಿಕೊಂಡರೆ, ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಎಲ್ಲಾ ಆಸ್ಪತ್ರೆಗಳಲ್ಲೂ ಡೆಂಗ್ಯೂ ರೋಗಕ್ಕೆ ಚಿಕಿತ್ಸೆ ಲಭ್ಯವಿದೆ. ಡೆಂಗ್ಯೂ ಜ್ವರ ತೀವ್ರಮಟ್ಟದಲ್ಲಿದ್ದರೆ, ರಕ್ತದಲ್ಲಿ ಪ್ಲೇಟ್‌ಲೆಟ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ವೈದ್ಯರು ಅಗತ್ಯ ಕ್ರಮ ಕೈಗೊಳ್ಳುತ್ತಾರೆ.