ರಾಯಚೂರು: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ, ದಿನೇ ಹೆಚ್ಚಾಗುತ್ತಿದ್ದು, ಸಿಂಧನೂರು ನಗರದ ಮಹಿಬೂಬಿಯಾ ಕಾಲೋನಿಯಲ್ಲಿ 6 ವರ್ಷದ ಮಗು ಡೆಂಗ್ಯೂಗೆ ಬಲಿಯಾಗಿದ್ದಾಳೆ.
ಅಂಗನವಾಡಿ ಕಾರ್ಯಕರ್ತೆ ಅನಿತಾರವರ ಮಗಳು ಸೋನು(6) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಮೂಲಕ ಜಿಲ್ಲೆಯಲ್ಲಿ ಡೆಂಗ್ಯೂವಿನಿಂದ ಇಬ್ಬರು ಮಕ್ಕಳು ಅಸುನೀಗಿದ್ದಾರೆ. ಒಂದು ವಾರದಿಂದ ಸಿಂಧನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋನುಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್‍ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ. ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ಕಾರು ಪಲ್ಟಿ – ಪಾರ್ಟಿಯಿಂದ ಬರುವಾಗ ಅಪಘಾತ?
Advertisement
Advertisement
ಕಳೆದ ವಾರವಷ್ಟೇ ಮಾನ್ವಿಯಲ್ಲಿ 5 ವರ್ಷದ ಬಾಲಕ ಡೆಂಗ್ಯೂಗೆ ಬಲಿಯಾಗಿದ್ದ. ಡೆಂಗ್ಯೂಗೆ ಜಿಲ್ಲೆಯಲ್ಲಿ ಇದುವರೆಗೂ 5 ಮಕ್ಕಳು ಬಲಿಯಾಗಿದ್ದಾರೆ ಅಂತ ಶಂಕಿಸಲಾಗಿದೆ. ಆದರೆ ಎರಡು ಪ್ರಕರಣಗಳು ಮಾತ್ರ ಧೃಡಪಟ್ಟಿವೆ. ಇಡೀ ಜಿಲ್ಲೆಯಲ್ಲಿ ವೈರಲ್ ಫೀವರ್ ಹೆಚ್ಚಾಗಿದ್ದು, ಡೆಂಗ್ಯೂ ಪ್ರಕರಣಗಳೂ ಸಹ ವಿಪರೀತವಾಗಿವೆ. ಇದನ್ನೂ ಓದಿ: ರಾಜ್ಯದಲ್ಲೂ ಗುಜರಾತ್ ಮಾದರಿ ಸಂಪುಟ ರಚನೆಯಾದರೆ ಒಳ್ಳೆಯದು: ವಿಜಯೇಂದ್ರ
Advertisement
ರಿಮ್ಸ್ ಆಸ್ಪತ್ರೆಯೊಂದರಲ್ಲೇ 30ಕ್ಕೂ ಅಧಿಕ ಮಕ್ಕಳಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಜಿಲ್ಲೆಯಾದ್ಯಂತ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 1,500ಕ್ಕೂ ಅಧಿಕ ಮಕ್ಕಳು ದಾಖಲಾಗಿದ್ದಾರೆ. ವೈರಲ್ ಫೀವರ್ ಹಾಗೂ ಡೆಂಗ್ಯೂ ಪ್ರಕರಣಗಳಿಂದ ಮಕ್ಕಳ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.
Advertisement