ಚಿಕ್ಕಮಗಳೂರು: ಕಡೂರು (Kaduru) ತಾಲೂಕಿನ ಸಖರಾಯಪಟ್ಟಣದಲ್ಲಿ ಮಹಾಮಾರಿ ಡೆಂಗ್ಯೂವಿಗೆ (Dengue) 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಮೃತ ಬಾಲಕಿಯನ್ನು 6 ವರ್ಷದ ಸಾನಿಯಾ ಎಂದು ಗುರುತಿಸಲಾಗಿದೆ. ಕಳೆದ 4 ದಿನಗಳ ಹಿಂದೆ ಸೋಂಕಿಗೆ ತುತ್ತಾಗಿದ್ದ ಬಾಲಕಿಯನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿ ಚೇತರಿಸಿಕೊಳ್ಳದ ಕಾರಣ ಶಿವಮೊಗ್ಗ (Shivamogga) ನಗರದ ಖಾಸಗಿ ಆಸ್ಪತ್ರೆಗೆ ಬಾಲಕಿಯನ್ನ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿದ್ದಾಳೆ.
Advertisement
ಡೆಂಗ್ಯೂ ಸೋಂಕಿಗೆ ಸರಕಾರಿ ಆಸ್ಪತ್ರೆಗಳಲ್ಲಿ(Government Hospital) ಸರಿಯಾದ ಚಿಕಿತ್ಸೆ ಸಿಗದ ಕಾರಣದಿಂದ ತನ್ನ ಮಗಳು ಸಾವಿಗೀಡಾಗಿದ್ದಾಳೆಂದು ಬಾಲಕಿ ಪೋಷಕರು ಆರೋಪಿಸಿದ್ದಾರೆ. ಮಗಳ ಚಿಕಿತ್ಸೆಗಾಗಿ ಬಾಲಕಿ ಪೋಷಕರು 4 ಲಕ್ಷ ರೂ. ಖರ್ಚು ಮಾಡಿದ್ದರು. ಆದರೂ ಬಾಲಕಿಯನ್ನು ಬದುಕಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ತಂದೆ ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ಗೋಬಿ, ಕಾಟನ್ ಕ್ಯಾಂಡಿ ಆಯ್ತು.. ಈಗ ಚಿಕನ್, ಫಿಶ್ ಕಬಾಬ್‌ಗೆ ಕರ್ನಾಟಕ ಶಾಕ್!
Advertisement
Advertisement
ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಸೋಂಕಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ಇದರಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದೆ. ಸಕಾಲದಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಕ್ಕಿದ್ದರೆ ಮಗಳು ಬದುಕುತ್ತಿದ್ದಳು ಎಂದು ಬಾಲಕಿ ತಂದೆ ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಪಾನಿಪುರಿ ಪ್ರಿಯರಿಗೆ ಬಿಗ್ ಶಾಕ್ – ದಿನೇಶ್ ಗುಂಡೂರಾವ್ ಹೇಳಿದ್ದೇನು?
Advertisement
ಜಿಲ್ಲೆಯಲ್ಲಿ ಡೆಂಗ್ಯೂ ವ್ಯಾಪಕವಾಗಿ ಹರಡುತ್ತಿದ್ದರೂ ಆರೋಗ್ಯ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು, ಗ್ರಾಮ ಪಂಚಾಯತ್ ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಂಡಿಲ್ಲ. ಸೋಂಕು ನಿಯಂತ್ರಣಕ್ಕೆ ಸರಕಾರ, ಜಿಲ್ಲಾಡಳಿತ ಅಗತ್ಯ ಕ್ರಮಕೈಗೊಳ್ಳಬೇಕು. ಸೋಂಕಿಗೆ ಬಡವರು ಹೆಚ್ಚಾಗಿ ತುತ್ತಾಗುತ್ತಿದ್ದಾರೆ. ಸೋಂಕಿತರು ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ. ಆದರೆ ಆಸ್ಪತ್ರೆಗಳಲ್ಲಿ ಡೆಂಗ್ಯೂ ಸೋಂಕಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ನನ್ನ ಮಗಳಿಗಾದ ಸ್ಥಿತಿ ಯಾರಿಗೂ ಆಗಬಾರದು. ಸರ್ಕಾರ ಇನ್ನಾದರೂ ಡೆಂಗ್ಯೂ ಸೋಂಕಿಗೆ ಸರಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ಸಿಗುವಂತಾಗಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಬಾಲಕಿ ಪೋಷಕರು ಮನವಿ ಮಾಡಿದ್ದಾರೆ.