ಅಮರಾವತಿ: ತನ್ನನ್ನು ನೋಡಿಕೊಳ್ಳಲು ಕುಟುಂಬದವರು ಯಾರೂ ಇಲ್ಲ ಎಂಬ ಕಾರಣಕ್ಕೆ ತುಂಬು ಗರ್ಭಿಣಿಯನ್ನು (Pregnant) ಆಸ್ಪತ್ರೆಗೆ (Hospital) ದಾಖಲಿಸಿಕೊಳ್ಳಲು ಸಿಬ್ಬಂದಿ ನಿರಾಕರಿಸಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ (Andhra Pradesh) ತಿರುಪತಿಯ (Tirupati) ಆಸ್ಪತ್ರೆಯೊಂದರಲ್ಲಿ ನಡೆದಿದೆ. ಕೊನೆಗೆ ಮಹಿಳೆ ಅಪರಿಚಿತ ವ್ಯಕ್ತಿಯೊಬ್ಬನ ಸಹಾಯದಿಂದ ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ.
ವರದಿಗಳ ಪ್ರಕಾರ 100 ಹಾಸಿಗೆಗಳ ತಿರುಪತಿ ಹೆರಿಗೆ ಆಸ್ಪತ್ರೆಯಲ್ಲಿ ಮಹಿಳೆಗೆ ದಾಖಲಾತಿಯನ್ನು ನಿರಾಕರಿಸಿದ ಬಳಿಕ ಅಲ್ಲಿಂದ ಹೊರ ಬರುತ್ತಿದ್ದಂತೆಯೇ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಅಲ್ಲೇ ಇದ್ದ ವ್ಯಕ್ತಿಯೊಬ್ಬ ಮಹಿಳೆಗೆ ಆಸ್ಪತ್ರೆಯ ಮುಂಭಾಗದ ರಸ್ತೆಯಲ್ಲಿ (Road) ಹೆರಿಗೆ (Delivery) ಮಾಡಿಸಿದ್ದಾನೆ.
Advertisement
Advertisement
ಮಹಿಳೆಗೆ ಹೆರಿಗೆ ಮಾಡಿಸುವ ವೇಳೆ ಅಲ್ಲೇ ಇದ್ದ ಕೆಲ ಮಹಿಳೆಯರು ಬೆಡ್‌ಶೀಟ್ ಹಿಡಿದುಕೊಂಡು ಆಕೆಯನ್ನು ಸುತ್ತುವರಿದಿದ್ದಾರೆ. ಮಹಿಳೆ ಹೆರಿಗೆ ವೇಳೆ ಚೀರಾಡುತ್ತಿರುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲೂ ಹರಿದಾಡಿದೆ. ಆಕೆಗೆ ಹೆರಿಗೆ ಮಾಡಿಸಿದ ವ್ಯಕ್ತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದಾನೆ ಎಂಬುದು ಬಳಿಕ ತಿಳಿದುಬಂದಿದೆ. ಇದನ್ನೂ ಓದಿ: ಜನಪ್ರಿಯ ಪಾನೀಯ ರಸ್ನಾ ಸೃಷ್ಟಿಕರ್ತ ಅರೀಜ್ ಪಿರೋಜ್‍ಶಾ ಖಂಬಟ್ಟಾ ನಿಧನ
Advertisement
Advertisement
ರಸ್ತೆಯಲ್ಲಿ ಮಹಿಳೆ ಮಗುವಿಗೆ ಜನ್ಮ ನೀಡಿದ ಬಳಿಕ ತಾಯಿ ಹಾಗೂ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗರ್ಭಿಣಿಯೊಂದಿಗೆ ಯಾರೂ ಇಲ್ಲವೆಂದರೂ ಆಸ್ಪತ್ರೆಯಲ್ಲಿ ಪ್ರವೇಶವನ್ನು ನಿರಾಕರಿಸಲಾಗುವುದಿಲ್ಲ. ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿರುಪತಿ ಜಿಲ್ಲಾ ಆರೋಗ್ಯ ಉಸ್ತುವಾರಿ ಶ್ರೀಹರಿ ತಿಳಿಸಿದ್ದಾರೆ. ಇದನ್ನೂ ಓದಿ: ಜೈಲಿನಲ್ಲಿ ಸತ್ಯೇಂದ್ರ ಜೈನ್‍ಗೆ ಮಾಡಿದ್ದು ಮಸಾಜ್ ಅಲ್ಲ, ಫಿಸಿಯೋಥೆರಪಿ – ಬಿಜೆಪಿಗೆ ಕೇಜ್ರಿವಾಲ್ ತಿರುಗೇಟು