ಬಳ್ಳಾರಿ: ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರ(BTPS) ಸ್ಥಾಪನೆಗೆ ಜಮೀನು ನೀಡಿ ಭರವಸೆಯಂತೆ ಕೆಲಸ ಸಿಗದೇ ಮನನೊಂದು ವ್ಯಕ್ತಿಯೊಬ್ಬರು ವಿದ್ಯುತ್ ತಂತಿ ಹಿಡಿದು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಧಾರುಣ ಘಟನೆ ಬಳ್ಳಾರಿ ತಾಲೂಕಿನ ಕುಡುತಿನಿ ಪಟ್ಟಣದ ಇಂದಿರಾ ನಗರದಲ್ಲಿ ನಡೆದಿದೆ.
ಕುಡುತಿನಿ ನಿವಾಸಿ ಚಂದ್ರಶೇಖರ (44) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 2001ರಲ್ಲಿ ಕುಡುತಿನಿ ಬಳಿ ಬಳ್ಳಾರಿ ಥರ್ಮಲ್ ಪವರ್ ಪ್ಲಾಂಟ್ ಸ್ಥಾಪನೆಯಾದ ಸಂದರ್ಭದಲ್ಲಿ ಚಂದ್ರಶೇಖರ್ ಅವರ ಕುಟುಂಬ 2.5 ಎಕರೆ ಜಮೀನನ್ನು ಯೋಜನಾ ಪ್ರದೇಶಕ್ಕೆ ನೀಡಿತ್ತು. ಭೂಮಿ ಕಳೆದುಕೊಂಡವರಿಗೆ ಕೆಲಸ ನೀಡುವ ನಿಯಮದಂತೆಕಳೆದ ಒಂದು ವರ್ಷದಿಂದ ಚಂದ್ರಶೇಖರ್ ಉದ್ಯೋಗಕ್ಕಾಗಿ ಕಾರ್ಖಾನೆಯ ಕಚೇರಿಗೆ ಅಲೆದಾಡುತ್ತಿದ್ದರು.
ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದ ಬಿಟಿಪಿಎಸ್ ಆಡಳಿತ ಮಂಡಳಿ ಅವರಿಗೆ ಅಗತ್ಯ ತರಬೇತಿಯನ್ನೂ ನೀಡಿತ್ತು. ಆದರೆ ತರಬೇತಿ ಮುಗಿದು ಬರೋಬ್ಬರಿ ಏಳು ತಿಂಗಳು ಕಳೆದರೂ ಕಂಪನಿ ಮಾತ್ರ ಉದ್ಯೋಗ ನೀಡದೆ ಸತಾಯಿಸುತ್ತಿತ್ತು ಎಂದು ಆರೋಪಿಸಲಾಗಿದೆ. ಇದರಿಂದ ತೀವ್ರ ಮಾನಸಿಕ ಖಿನ್ನತೆ ಹಾಗೂ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಚಂದ್ರಶೇಖರ, ಊರಿನಲ್ಲಿ ವಿದ್ಯುತ್ ತಂತಿಯನ್ನು ಹಿಡಿದು ಪ್ರಾಣ ಕಳೆದುಕೊಂಡಿದ್ದಾರೆ. ಇದನ್ನೂ ಓದಿ: ಡ್ಯೂಪ್ಲಿಕೇಟ್ ಕೀ ಬಳಸಿ ಐಷಾರಾಮಿ ಕಾರುಗಳ ಕಳ್ಳತನ – ಕರ್ನಾಟಕದಿಂದ ರಾಜಸ್ಥಾನವರೆಗೆ ‘ಕಾರ್ ಕಳ್ಳರ’ ಜಾಲ; ಇಬ್ಬರು ಅರೆಸ್ಟ್
ಘಟನಾ ಸ್ಥಳಕ್ಕೆ ಕುಡುತಿನಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

