ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ.
ಬೆಂಗಳೂರು ಉತ್ತರ ತಾಲೂಕಿನ ಶಿವರಾಮಕಾರಂತ ಬಡಾವಣೆಯಲ್ಲಿ ಅಕ್ರಮವಾಗಿ 257 ಎಕರೆ ವಿಸ್ತೀರ್ಣದ ಜಮೀನು ಡಿನೋಟಿಫಿಕೇಷನ್ ಮಾಡಿದ್ದಾರೆ ಅಂತ ಆರೋಪಿಸಿ ಎಸಿಬಿ ಎಡಿಜಿಪಿಗೆ ದೂರು ನೀಡಲಾಗಿದೆ.
Advertisement
ಜನಸಾಮಾನ್ಯರ ವೇದಿಕೆ ಸಂಚಾಲಕರಾದ ಅಯ್ಯಪ್ಪ ಎಂಬವರು ಬಿಎಸ್‍ವೈ ವಿರುದ್ಧ ದೂರು ದಾಖಲಿಸಿದ್ದಾರೆ. ಯಡಿಯೂರಪ್ಪನವರ ವಿರುದ್ಧ ಸಿಎಂ ಸಿದ್ದರಾಮಯ್ಯ ಕ್ರಮಕೈಗೊಳ್ಳಬೇಕು ಅಂತ ಅಯ್ಯಪ್ಪ ಹೇಳಿದ್ದಾರೆ. ಇದೇ ಹಿನ್ನೆಲೆಯಲ್ಲಿ ಮೌರ್ಯ ಸರ್ಕಲ್ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಜನಸಾಮಾನ್ಯರ ವೇದಿಕೆ ಪ್ರತಿಭಟನೆ ನಡೆಸಿತು. ಯಡಿಯೂರಪ್ಪ ಕರಪ್ಶನ್ ಕಾ ಕಿಂಗ್ ಅಂತಾ ಘೋಷಣೆ ಕೂಗಿದ್ರು.
Advertisement
Advertisement
ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಯಡಿಯೂರಪ್ಪ, ದೂರುದ್ದೇಶದಿಂದ ಈ ರೀತಿ ಆರೋಪ ಮಾಡ್ತಿದ್ದಾರೆ. ಅದ್ಯಾವುದೇ ಇದ್ರೂ ಸರ್ಕಾರ ವಾಪಸ್ ತೆಗೆದುಕೊಳ್ಳಬಹುದು. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದಿದ್ದಾರೆ.