– ಮುಂದಿನ 2-3 ದಿನ ಮಳೆ ಬಿರುಸು
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ (Bay Of Bengal) ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಮುಂದಿನ 2-3 ದಿನ ಮಳೆ (Rain) ಬಿರುಸು ಪಡೆಯುವ ಸಾಧ್ಯತೆಯಿದ್ದು, 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.
Advertisement
ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: Haryana Result | 2 ಲಕ್ಷ ಸರ್ಕಾರಿ ಉದ್ಯೋಗ ಭರವಸೆ, 100 ಚದರ ಅಡಿ ಸೈಟು ಫ್ರೀ ಗ್ಯಾರಂಟಿ: ಯಾರ ʻಕೈʼ ಮೇಲಾಗುತ್ತೆ?
Advertisement
Advertisement
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬಳ್ಳಾರಿ, ಕೋಲಾರ, ವಿಜಯನಗರ, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ರಾಜಕೀಯ ಕೈದಿಗಳಿಗೆ ಕ್ಷಮಾದಾನ, ಆರ್ಟಿಕಲ್ 370 ಮರುಸ್ಥಾಪನೆ – J&K ನಲ್ಲಿ ಪಕ್ಷಗಳ ಪ್ರಣಾಳಿಕೆ ಬಲ ನೀಡುತ್ತಾ?
Advertisement
ಇತ್ತ ಹಿಂಗಾರು ಕಾಲಿಟ್ಟ ವಾರದಲ್ಲೇ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ವಾಡಿಕೆ ಪ್ರಕಾರ ಹಿಂಗಾರು 41 ಮಿ.ಮೀ ಮಳೆಯಾಗಬೇಕಿತ್ತು. ಸದ್ಯ ದಕ್ಷಿಣ ಒಳನಾಡು ಭಾಗದಲ್ಲಿ 54 ಮಿ.ಮೀ ಮಳೆಯಾಗಿದೆ. ಶೇ. 32ರಷ್ಟು ಹೆಚ್ಚು ಮಳೆಯಾಗಿದೆ. ಆದರೆ ಉತ್ತರ ಒಳನಾಡು, ಹಾಗೂ ಕರಾವಳಿ ಭಾಗದಲ್ಲಿ ಮಳೆ ಕೊರತೆಯಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ ಅವಾಂತರ – 60 ಮನೆಗಳಿಗೆ ಪರಿಹಾರ ನೀಡಲು ಬಿಬಿಎಂಪಿ ಪಟ್ಟಿ ಸಿದ್ಧ