ಮೈಸೂರು: ಇತ್ತೀಚೆಗೆ ಇಲ್ಲಿನ ಹುಣಸೂರಿನಲ್ಲಿ ನಡೆದ ಹನುಮಜಯಂತಿ ಮೆರವಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲಿಸುವಂತೆ ಸೂಚನೆ ನೀಡಿರುವುದಾಗಿ ಜಿಲ್ಲಾಧಿಕಾರಿ ಡಿ.ರಂದೀಪ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೆರವಣಿಗೆ ವೇಳೆ ಸಂಸದ ಪ್ರತಾಪ್ ಸಿಂಹ ಅವರು ನಿಬಂಧನೆ ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ನಿಯಮ ಉಲ್ಲಂಘನೆ ವಿಚಾರವಾಗಿ ಮೋಟಾರ್ ಕಾಯ್ದೆಯಡಿ ದೂರು ದಾಖಲು ಮಾಡಲು ಸೂಚಿಸಿದ್ದೇನೆ ಅಂದ್ರು. ಇದನ್ನೂ ಓದಿ: ಪ್ರತಾಪ್ ಸಿಂಹ ವಿರುದ್ಧ ಐಪಿಸಿ ಸೆಕ್ಷನ್ 188 ಸೇರಿಸಿ ಪೇಚಿಗೆ ಸಿಲುಕಿದ ಖಾಕಿಗಳು!
Advertisement
Advertisement
ಮೆರವಣಿಗೆ ವೇಳೆ ಸಂಸದ ಪ್ರತಾಪ್ ಸಿಂಹ ಅವರು ವಿಶೇಷ ವಾಹನ ಬಳಸಿದ್ದರು. ಹನುಮ ಜಯಂತಿ ಮೆರವಣಿಗೆ ಅನುಮತಿ ನೀಡುವ ವೇಳೆ ವಿಶೇಷ ವಾಹನ ಬಳಸುವಂತಿಲ್ಲ ಎಂದು ನಿಬಂಧನೆ ವಿಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಿಬಂಧನೆ ಉಲ್ಲಂಘನೆಗೆ ಕೇಸು ದಾಖಲಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ಪೊಲೀಸ್ ಪಂಜರದಲ್ಲೇ ಸಿಂಹ ಘರ್ಜನೆ-ಈದ್ ಮಿಲಾದ್ ಆಚರಣೆಯೂ ಹಿಂಗೇ ಇರಬೇಕೆಂದು ಆಗ್ರಹ
Advertisement
Advertisement
ಹನುಮಜಯಂತಿಯನ್ನ ವಿಶೇಷ ಪ್ರಕರಣವಾಗಿ ಪರಿಗಣಿಸಿಲಾಗಿತ್ತು. ಇನ್ಯಾವುದೇ ಧರ್ಮದ ಜಯಂತಿಗೆ ಈ ರೀತಿಯ ವ್ಯವಸ್ಥೆ ಇರೋದಿಲ್ಲ. ಸಮಸ್ಯೆಯಾಗಿದ್ದಕ್ಕೆ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡಿತ್ತು. ಇತರೆ ಜಯಂತಿಗಳು ಶಾಂತಿಯುತವಾಗಿ ನಡೆಯಲಿವೆ ಅಂತ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.