Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಡುಪಿಯ ಹಲವೆಡೆ ಉಪಲೋಕಾಯುಕ್ತ ದಿಢೀರ್ ದಾಳಿ – ಜೀನ್ಸ್ ಪ್ಯಾಂಟ್ ಧರಿಸಿ ಬಂದ ಸರ್ಕಾರಿ ನೌಕರರಿಗೆ ತರಾಟೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉಡುಪಿಯ ಹಲವೆಡೆ ಉಪಲೋಕಾಯುಕ್ತ ದಿಢೀರ್ ದಾಳಿ – ಜೀನ್ಸ್ ಪ್ಯಾಂಟ್ ಧರಿಸಿ ಬಂದ ಸರ್ಕಾರಿ ನೌಕರರಿಗೆ ತರಾಟೆ

Latest

ಉಡುಪಿಯ ಹಲವೆಡೆ ಉಪಲೋಕಾಯುಕ್ತ ದಿಢೀರ್ ದಾಳಿ – ಜೀನ್ಸ್ ಪ್ಯಾಂಟ್ ಧರಿಸಿ ಬಂದ ಸರ್ಕಾರಿ ನೌಕರರಿಗೆ ತರಾಟೆ

Public TV
Last updated: February 27, 2026 4:35 pm
Public TV
Share
3 Min Read
udupi lokayukta raid
SHARE

ಉಡುಪಿ: ಇಲ್ಲಿನ ಹಲವೆಡೆ ಉಪಲೋಕಾಯುಕ್ತ (Deputy Lokayukta) ದಿಢೀರ್ ದಾಳಿ ನಡೆಸಿ, ಸರ್ಕಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ದಾಳಿ ಮಾಡಲಾಗಿತ್ತು. ಜೀನ್ಸ್ ಪ್ಯಾಂಟ್ ಧರಿಸಿ ಬಂದ ಸರ್ಕಾರಿ ನೌಕರರ ಬೆವರಿಳಿಸಿದರು. ಚಿಟ್ ಫಂಡ್ ದಾಖಲೆ ಹಿಡಿದುಕೊಂಡು ಬಂದಿದ್ದ ಸರ್ಕಾರಿ ನೌಕರರ ವಿರುದ್ಧ ಗರಂ ಆದರು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಕಂದಾಯ ಇಲಾಖೆ ಸಮಾವೇಶ – 25,000 ಫಲಾನುಭವಿಗಳಿಗೆ ಸವಲತ್ತು ಸಮರ್ಪಣೆ

ಮಂಜುರಾದ ಸರ್ಕಾರಿ ಭೂಮಿಗಾಗಿ ಮಾಜಿ ಸೈನಿಕನು ಅಲೆದಾಡುತ್ತಿರುವ ಮಾಜಿ ಸೈನಿಕರ ಸಂಕಷ್ಟವನ್ನು ಲೋಕಾಯುಕ್ತ ಕೇಳಿತು. ತಾಂತ್ರಿಕ ದೋಷ ಸರಿಪಡಿಸಿ ತಕ್ಷಣವೇ ಭೂಮಿ ಮಂಜೂರು ಮಾಡುವಂತೆ ಸೂಚನೆ ನೀಡಿತು. ನೌಕರನೊಬ್ಬ ತನ್ನ ವೈಯಕ್ತಿಕ ಬ್ಯಾಗ್‌ನಲ್ಲಿ ಸಾಲ ಇಟ್ಟುಕೊಂಡಿದ್ದ. ನೌಕರನನ್ನು ಅಮಾನತು ಮಾಡುವಂತೆ ಸೂಚನೆ ನೀಡಲಾಗಿದೆ.

ಸರ್ವೇ ಕಚೇರಿಯಲ್ಲಿ ಅಸಮರ್ಪಕ ದಾಖಲೆ ಕಂಡು ನೌಕರರ ವಿರುದ್ಧ ಗರಂ ಆದರು. ಬೆಳ್ಳಂಬೆಳಗ್ಗೆ ಮಲ್ಪೆ ಬಂದರು ಪ್ರದೇಶದ ಮೇಲೂ ದಾಳಿ ನಡೆಸಲಾಯಿತು. ಸಮುದ್ರ ಸೇರುತ್ತಿರುವ ಕೊಳಕು ನೀರಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಲಾಯಿತು. ಕೊಳಕು ನೀರು ತಿಂದ ಮೀನುಗಳು ದೇಶಕ್ಕೆಲ್ಲ ಸರಬರಾಜಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದೆ.

ಉಡುಪಿ ಸರ್ಕಾರಿ ಬಸ್ ನಿಲ್ದಾಣ ಅವ್ಯವಸ್ಥೆ ತಾಂಡವವಾಡುತ್ತಿದೆ. ತಿಂಡಿಯ ದರ ನಮೂದಿಸದ ಹೋಟೆಲ್ ಮಾಲೀಕನನ್ನು ತರಾಟೆಗೆ ತೆಗೆದುಕೊಳ್ಳಲಾಯಿತು. ದೋಸೆ ಮಾಡಲು ಬಳಸುವ ಸೊರಕೆ ಕಂಡು ಕೆಂಡಮಂಡಲ ಆದರು. ಬಸ್ ನಿಲ್ದಾಣದ ಸ್ವಚ್ಛತಾ ಕಾರ್ಮಿಕರ ಸಂಕಷ್ಟ ಆಲಿಸಿದರು.

ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಮಾತನಾಡಿ, ಉಡುಪಿಯಲ್ಲಿ ಕಚೇರಿಗಳ ಭೇಟಿ ಮಾಡಿ ನನಗೆ ಬಹಳ ನೋವಾಗಿದೆ. ನಿಟ್ಟೂರಿನ ಶುದ್ದೀಕರಣ ಘಟಕ ಸಂಪೂರ್ಣ ಹಾಳಾಗಿದೆ. ಕೊಳಕು ನೀರಿನ ಶುದ್ಧೀಕರಣ ಕಾರ್ಯ ಆಗುತ್ತಿಲ್ಲ. ಬಂದರಿನ ಕೊಳಚೆ ಬಗ್ಗೆ ಸುಮೋಟೋ ಪ್ರಕರಣ ದಾಖಲಿಸುತ್ತಿದ್ದೇವೆ. ನಿಟ್ಟೂರಿನ ತ್ಯಾಜ್ಯ ನೀರು ಶುದ್ಧೀಕರಣ ಘಟಕದ ಅಸಮರ್ಪಕ ನಿರ್ವಹಣೆ ಬಗೆಗೂ ಸುಮೋಟೋ ಪ್ರಕರಣ ದಾಖಲಿಸಲಾಗುವುದು. ಗಲೀಜು ನೀರನ್ನು ಉಡುಪಿಯ ಜನಕ್ಕೆ ಕೊಡುತ್ತಿದ್ದಾರೆ. ಸಮುದ್ರಕ್ಕೆ ಕೊಳಕು ನೀರು ಬಿಟ್ಟು ರಾಜ್ಯಕ್ಕೆಲ್ಲ ಮೀನು ಹಂಚುತ್ತಿದ್ದಾರೆ. ಕೆಮಿಕಲ್ಸ್ ಎಲ್ಲ ನೀರಿಗೆ ಸೇರಿ ಮೀನುಗಾರಿಕೆ ಕುಸಿತವಾಗಿದೆ. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಗಲೀಜು ಹಾಕಲು ಓಪನ್ ಡ್ರಮ್ ಇಟ್ಟಿದ್ದಾರೆ ಎಂದು ಬೇಸರ ಹೊರಹಾಕಿದರು. ಇದನ್ನೂ ಓದಿ: ದಲಿತರಿಗೆ ಕ್ಷೌರ ನಿರಾಕರಣೆ – ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭ

ಪ್ರತ್ಯೇಕ ಡಸ್ಟ್ ಬಿನ್ ಇರಿಸಲು ಸೂಚಿಸಲಾಗಿದೆ. ತಾಲೂಕು ಕಚೇರಿಯಲ್ಲಿ ತುಂಬಾ ಕೇಸುಗಳು ಪೆಂಡಿಂಗ್ ಇವೆ. ಸಬ್ ರಿಜಿಸ್ಟರ್ ಕಚೇರಿಯಲ್ಲಿ ಸರ್ಕಾರಿ ದಾಖಲೆಗಳು ಖಾಸಗಿಯಾಗಿ ಬ್ಯಾಗಿನಲ್ಲಿ ಇರಿಸಿಕೊಳ್ಳಲಾಗಿದೆ. ಮಾಜಿ ಸೈನಿಕರೊಬ್ಬರ ಭೂಮಿ ಏಳು ವರ್ಷ ಆದರೂ ಸರ್ವೆ ಮಾಡಿಲ್ಲ. ಅಟೆಂಡೆನ್ಸ್ ರಿಜಿಸ್ಟರ್ ಸಮರ್ಪಕವಾಗಿಲ್ಲ. ಸರ್ಕಾರಿ ನೌಕರ ಚಿಟ್ ಫಂಡ್ ದಾಖಲೆ ಇಟ್ಟುಕೊಂಡಿದ್ದಾರೆ. ಸರ್ಕಾರಿ ನೌಕರ ಚಿಟ್ ಫಂಡ್ ಮಾಡುವುದರಲ್ಲಿ ಅರ್ಥ ಇಲ್ಲ. ಎಲ್ಲಾ ನೌಕರರು ಜೀನ್ಸ್ ಪ್ಯಾಂಟಿನಲ್ಲಿ ಬಂದಿದ್ದಾರೆ. ಸರ್ಕಾರಿ ನೌಕರರಿಗೆ ಡ್ರೆಸ್ ಕೋಡ್ ಇದೆ. ಆರಾಮಾಗಿ ಜೀನ್ಸ್ ಪ್ಯಾಂಟ್ ಹಾಕಿಕೊಂಡು ಬಂದಿದ್ದಾರೆ. ಸಬ್ ರಿಜಿಸ್ಟರ್ ಕಚೇರಿಯಲ್ಲಿ ಇಬ್ಬರು ಸಿಬ್ಬಂದಿ ಮೇಲೆ ಕೇಸ್ ರಿಜಿಸ್ಟರ್ ಮಾಡುತ್ತೇವೆ. ನನಗೆ ತುಂಬಾ ನೋವಾಗಿದೆ ಎಂದರು.

ದೇಸಿ ಕಚೇರಿಯಲ್ಲಿ ಮೀಟಿಂಗ್ ಮಾಡಿದಾಗ ಇಲ್ಲಿಯ ಜನ ಬಹಳ ಬುದ್ಧಿವಂತರು ಎಂದಿದ್ದಾರೆ. ಇಲ್ಲಿ ಸಾಕ್ಷರರು ಜಾಸ್ತಿ ಎಂದು ಹೇಳಿದ್ದಾರೆ. ವಿದ್ಯಾವಂತ ಮೋಸಗಾರರಿಂದ ದೇಶ ಹಾಳಾಗುತ್ತಿದೆ. ಇಲ್ಲಿ ಅದರ ಉದಾಹರಣೆ ಕಾಣುತ್ತಿದೆ. ಏನೇ ಕೇಳಿದರೂ ಬಾಯಿ ಮುಚ್ಚಿ ಕೂತಿರುತ್ತಾರೆ. ಮೌನವೇ ಉತ್ತರ ಎಂಬಂತೆ ಇರುತ್ತಾರೆ. ಇಲ್ಲಿ ಅಧಿಕಾರಿಗಳು ವಿದ್ಯಾವಂತರಿದ್ದಾರೆ, ಆದರೆ ಮೋಸಗಾರರಿದ್ದಾರೆ. ನಮಗೆ ಯಾಮಾರಿಸುತ್ತಾರೆ. ಎಲ್ಲಾ ವಿಚಾರಗಳ ಬಗ್ಗೆ ಸುಮೋಟೋ ಪ್ರಕರಣ ದಾಖಲಿಸುತ್ತೇವೆ. ಸರ್ಕಾರಿ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಸಲು ಪರವಾನಿಗೆ ಸಿಕ್ಕಂತೆ ಆಗಿದೆ ಎಂದು ತಿಳಿಸಿದರು.

TAGGED:deputy lokayuktalokayukta raidudupiಉಡುಪಿಉಪಲೋಕಾಯುಕ್ತ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories

You Might Also Like

Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
16 minutes ago
Train
Bengaluru City

ಮೈಸೂರು-ಜಲ್ಪೈಗುಡಿ ಜಂಕ್ಷನ್ ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
18 minutes ago
China Xi Jinping Taiwan Opposition leader cheng Li wun
Latest

ಚೀನಾ-ತೈವಾನ್‌ ಐತಿಹಾಸಿಕ ಮಾತುಕತೆ – ಈ ಭೇಟಿಗೆ ಇಷ್ಟೊಂದು ಮಹತ್ವ ಯಾಕೆ?

Public TV
By Public TV
22 minutes ago
Rohit Sharma
Cricket

ಮುಂಬೈ ಇಂಡಿಯನ್ಸ್‌ನಲ್ಲಿ 15 ವರ್ಷ ಪೂರೈಸಿದ ರೋಹಿತ್ – ಇತಿಹಾಸ ನಿರ್ಮಿಸಿದ ಹಿಟ್‌ಮ್ಯಾನ್‌

Public TV
By Public TV
23 minutes ago
Israeli Attack On Lebanon
Latest

ಟ್ರಂಪ್‌ ಮಾತಿಗಿಲ್ಲ ಕಿಮ್ಮತ್ತು – ಲೆಬನಾನ್‌ನ 2 ಪಟ್ಟಣಗಳ ಮೇಲೆ ಮತ್ತೆ ಇಸ್ರೇಲ್‌ ದಾಳಿ

Public TV
By Public TV
40 minutes ago
Love
Latest

ಪ್ರೀತಿ ಕೈಬೀಸಿ ಕರೆಯುವಾಗ ಎಲ್ಲವನ್ನೂ ಬಿಟ್ಬಿಡ್ಬೇಕಂತೆ..!

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?