ಬೆಂಗಳೂರು: ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಪುಸ್ತಕ ಬರೆದು, ವಿಡಿಯೋ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಕುರಿತು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಈ ಕುರಿತು ಮಾತನಾಡಿದ ಸಚಿವರು, ಬಸವಣ್ಣನವರ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡಿರುವುದು ನಿಜಕ್ಕೂ ಖಂಡನೀಯ. ಬಸವಣ್ಣನವರು ನಮ್ಮ ನಾಡಿನ ಸಾಂಸ್ಕೃತಿಕ ನಾಯಕ. ಸರಿಯಾಗಿ ಇತಿಹಾಸ ಗೊತ್ತಿಲ್ಲದವರು ತಮ್ಮ ಸ್ವಾರ್ಥಕ್ಕಾಗಿ ಬೇಳೆ ಬೇಯಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಇತಿಹಾಸವನ್ನು ತಿರುಚುವ ಇಂತಹ ಪ್ರಯತ್ನಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಇದನ್ನೂ ಓದಿ: ಬಸವಮಂಟಪ ಕೃತಿ ಮುಟ್ಟುಗೋಲಿಗೆ ಈಶ್ವರ ಖಂಡ್ರೆ ಒತ್ತಾಯ
ಅವಹೇಳನಕಾರಿ ಪುಸ್ತಕ ಬರೆದವರ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಸುದೀರ್ಘವಾಗಿ ಚರ್ಚಿಸಲಾಗುವುದು. ಆ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕೋ ಅಥವಾ ಸಂಪೂರ್ಣವಾಗಿ ನಿಷೇಧ ಮಾಡಬೇಕೋ ಎಂಬ ಬಗ್ಗೆ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಿವರಾಜ್ ತಂಗಡಗಿ ತಿಳಿಸಿದ್ದಾರೆ.ಇದನ್ನೂ ಓದಿ: 2025ರ ನ.18 ರಂದು ಉಗ್ರನಾಗಿದ್ದ ಲತೀಫ್ – ಆನಿವರ್ಸರಿ ದಿನದಂದೇ ಭದ್ರತಾ ಪಡೆಗಳ ಬೇಟೆ!
