ರಾಗಾ ವಿರುದ್ಧ ಅವಹೇಳನಕಾರಿ ಹೇಳಿಕೆ – ಯತ್ನಾಳ್ ವಿರುದ್ಧ ಎಫ್‌ಐಆರ್

Public TV
1 Min Read
Basangouda Patil Yatnal 1

ಬೆಂಗಳೂರು: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಹಿನ್ನೆಲೆ ಬಿಜೆಪಿ (BJP) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಯತ್ನಾಳ್, ರಾಹುಲ್ ಗಾಂಧಿ ಹಾಗೂ ಧರ್ಮಗಳ ಬಗ್ಗೆ ಅವಹೇಳನ ಮಾಡಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ವೇಳೆ ಅವಹೇಳನಕಾರಿ ಪದ ಬಳಸಿದ್ದಾರೆ. ಹೀಗಾಗಿ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಹರ್ ದೂರು ನೀಡಿದ್ದಾರೆ. ಇದನ್ನೂ ಓದಿ: 35 ವರ್ಷದಲ್ಲೇ ದಾಖಲೆ – ಜಮ್ಮು ಕಾಶ್ಮೀರದಲ್ಲಿ ಭರ್ಜರಿ ಮತದಾನ

ಈ ದೂರಿನ ಆಧಾರದ ಮೇಲೆ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಕಲಬುರಗಿಯಲ್ಲಿ ನಾಟಕ ಕಂಪನಿಯನ್ನು ತಂದು ನಾಟಕ ತೋರಿಸಿ ಹೋಗಿದ್ದಾರೆ: ಛಲವಾದಿ ಲೇವಡಿ

Share This Article