ಮಂಗಳೂರು: ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ (Sunil Kumar) ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ (Social Media) ಅವಹೇಳನಕಾರಿ ಬರಹ ಪ್ರಕಟಿಸಿದ್ದ ಕಾರ್ಕಳದ ಇಬ್ಬರು ಸ್ಥಳೀಯ ಮುಖಂಡರಿಗೆ ಬೆಂಗಳೂರಿನ 12ನೇ ಸಿಟಿ ಸಿವಿಲ್ ನ್ಯಾಯಾಲಯ ದಂಡ ವಿಧಿಸುವ ಜತೆಗೆ ಕ್ಷಮೆಯಾಚನೆಗೆ ಸೂಚಿಸಿದೆ.
ಕೊರೊನಾ (Corona) ಲಾಕ್‍ಡೌನ್ (Lock Down) ಸಂದರ್ಭದಲ್ಲಿ ಕಾರ್ಕಳದ ಯೋಗೇಶ್ ನಯನಾ ಇನ್ನಾ ಹಾಗೂ ರಾಧಾಕೃಷ್ಣ ನಾಯಕ್ ಎಂಬುವರು ಸಚಿವ ಸುನಿಲ್ ಕುಮಾರ್ ವಿರುದ್ಧ ಫೇಸಬುಕ್ ಸೇರಿದಂತೆ ಇತರೆ ಜಾಲತಾಣದಲ್ಲಿ ಅವಹೇಳನಕಾರಿ, ಸುಳ್ಳು ಹಾಗೂ ದುರುದ್ದೇಶಪೂರಿತ ಬರಹವನ್ನು ಪ್ರಕಟಿಸಿದ್ದರು.
ಈ ಹಿನ್ನೆಲೆಯಲ್ಲಿ ನ್ಯಾಯಾಲಯದ (Court) ಮೊರೆ ಹೋದ ಸುನಿಲ್ ಕುಮಾರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ದೋಷಿಗಳಿಗೆ ಕ್ಷಮೆ ಯಾಚಿಸುವ ಜತೆಗೆ ತಲಾ 25 ಸಾವಿರ ರೂ. ದಂಡ ಸಲ್ಲಿಸಬೇಕು. ಜತೆಗೆ ಆಧಾರ ರಹಿತ, ಅಪ್ರಮಾಣಿಕೃತ, ದುರುದ್ದೇಶಪೂರಿತ ಬರಹಗಳನ್ನು ಜಾಲತಾಣದಲ್ಲಿ ಪ್ರಕಟಿಸದಂತೆ ಪ್ರತಿಬಂಧ ವಿಧಿಸಿದೆ. ಇದನ್ನೂ ಓದಿ: ಪುರಭವನದಲ್ಲಿ ಭಾರೀ ಹೈಡ್ರಾಮಾ – ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆ ಕಾರ್ಯಕ್ರಮ ರದ್ದು
ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಸಚಿವ ಸುನಿಲ್ ಕುಮಾರ್, ನನ್ನ ವಿರುದ್ಧ ಜಾಲತಾಣದಲ್ಲಿ ಕೆಲವರು ವ್ಯವಸ್ಥಿತ ಅಪಪ್ರಚಾರ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದೆ. ಈಗ ನನ್ನ ಪರ ತೀರ್ಪು ಬಂದಿದೆ. ಮಾನಹಾನಿಕಾರಿ ಬರಹಗಳನ್ನು ಜಾಲತಾಣದಲ್ಲಿ ಪ್ರಕಟಿಸುವವರಿಗೆ ಇದೊಂದು ಪಾಠ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಾಸಕ ಎ.ಮಂಜುನಾಥ್ ಬಿಜೆಪಿ ಸೇರಲು ಸಿ.ಪಿ.ಯೊಗೇಶ್ವರ್ ಜೊತೆ ಸುತ್ತುತ್ತಿದ್ರು: ಬಾಲಕೃಷ್ಣ ಬಾಂಬ್
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k