ಬಾಲಿವುಡ್ ನಟ ಹೃತಿಕ್ ರೋಷನ್ ‘ಕ್ರಿಶ್ 4’ (Krrish 4) ಸಿನಿಮಾ ಮೂಲಕ ಮೊದಲ ಬಾರಿಗೆ ನಿರ್ದೇಶನಕ್ಕಿಳಿದಿದ್ದಾರೆ. ಈ ಚಿತ್ರಕ್ಕಾಗಿ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ. ಇದರ ನಡುವೆ ಚಿತ್ರದ ಬಗ್ಗೆ ಕ್ರೇಜಿ ಅಪ್‌ಡೇಟ್‌ವೊಂದು ಸಿಕ್ಕಿದೆ. ಹೃತಿಕ್ ರೋಷನ್‌ಗೆ ನಾಯಕಿಯಾಗಿ ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ (Priyanka Chopra) ಕಾಣಿಸಿಕೊಳ್ಳಲಿದ್ದಾರೆ.

ಈ ಹಿಂದೆ ‘ಕ್ರಿಶ್’ ಹಾಗೂ ‘ಕ್ರಿಶ್ 3’ ಸರಣಿಯಲ್ಲಿ ಹೃತಿಕ್‌ಗೆ ಜೊತೆಯಾಗಿ ಪ್ರಿಯಾಂಕಾ ನಟಿಸಿದ್ದರು. ಈಗ ಹಲವು ವರ್ಷಗಳ ಬಳಿಕ ಮತ್ತೆ ‘ಕ್ರಿಶ್ 4’ಗೆ ನಟಿ ಸಾಥ್ ನೀಡುತ್ತಿದ್ದಾರೆ. ಇದನ್ನೂ ಓದಿ:ಚಂದನ್ ಶೆಟ್ಟಿ ಜೊತೆಗಿನ ‘ಮುದ್ದು ರಾಕ್ಷಸಿ’ ಶೂಟಿಂಗ್ ಮುಗಿಸಿದ ನಿವೇದಿತಾ ಗೌಡ
ಸದ್ಯ ರಾಜಮೌಳಿ ನಿರ್ದೇಶನದ ಹಾಗೂ ಮಹೇಶ್ ಬಾಬು ನಟನೆಯ ಹೊಸ ಸಿನಿಮಾದಲ್ಲಿ ಪ್ರಿಯಾಂಕಾ ಚೋಪ್ರಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಸಿನಿಮಾಗಾಗಿ ಅವರು 30 ಕೋಟಿ ರೂ. ಸಂಭಾವನೆ ಚಾರ್ಜ್ ಮಾಡಿದ್ದಾರೆ.



