ಗೆಲ್ಲುವ ಅಭ್ಯರ್ಥಿ ಎಂದೇ ನಿರೀಕ್ಷೆ ಹುಟ್ಟಿಸಿದ್ದ ನಟ, ಜೆಡಿಎಸ್ ಯುವ ರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ (Assembly Election) ಸೋಲನ್ನುಂಡಿದ್ದಾರೆ. ಈಗಲೂ ರಾಮನಗರ (Ramanagara) ಜನತೆಗೆ ಈ ಸೋಲವನ್ನು(Defeat) ಅರಗಿಸಿಕೊಳ್ಳಲು ಆಗುತ್ತಿಲ್ಲ. ಹಾಗಾಗಿ ನಿಖಿಲ್ ಅವರ ಅನೇಕ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಕಣ್ಣೀರಿನ ವಿಡಿಯೋ ಹಾಕುತ್ತಿದ್ದಾರೆ. ತಾವು ರಾಮನಗರದಲ್ಲಿ ಸೋತರೂ, ನಿನ್ನೆ ಅಲ್ಲಿಗೆ ತೆರಳಿದ್ದ ನಿಖಿಲ್ ಕುಮಾರ ಸ್ವಾಮಿ ಪ್ರತಿ ಮನೆ ಮನೆಗೆ ತೆರಳಿ ಧನ್ಯವಾದ ತಿಳಿಸಿದ್ದಾರೆ. ಈ ನಡೆ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.
Advertisement
2019ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ (Sumalatha) ಅವರ ಎದುರು ಸೋತಿದ್ದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸವಿತ್ತು. ಆದರೆ, ಆ ವಿಶ್ವಾಸ ಹುಸಿಯಾಗಿದೆ. ಈ ಕ್ಷೇತ್ರವನ್ನು ನಿಖಿಲ್ ಅವರ ತಾಯಿ ಅನಿತಾ ಕುಮಾರಸ್ವಾಮಿ ಬಿಟ್ಟುಕೊಟ್ಟಿದ್ದರು. ಮಗನ ಮೇಲೆ ಅತೀವ ನಿರೀಕ್ಷೆ ಕೂಡ ಇಟ್ಟುಕೊಂಡಿದ್ದರು.
Advertisement
Advertisement
ರಾಮನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್ (Congress) ಅಭ್ಯರ್ಥಿ ಇಕ್ಬಾಲ್ ಹುಸೇನ್ ಎದುರು 10,715 ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ನಿಖಿಲ್ ಕುಮಾರಸ್ವಾಮಿ ಫೇಸ್ಬುಕ್ನಲ್ಲಿ ಭಾವುಕ ಪೋಸ್ಟ್ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಬಂದೂಕಿನೊಂದಿಗೆ ಆಟವಾಡಿದ ‘ಬಿಗ್ ಬಾಸ್’ ಅಬ್ದು ರೋಜಿಕ್ ವಿರುದ್ಧ ಪ್ರಕರಣ ದಾಖಲು
Advertisement
ನನ್ನನ್ನು ಅತ್ಯಂತ ಪ್ರೀತಿಯಿಂದ ಬೆಂಬಲಿಸಿ ಆಶೀರ್ವದಿಸಿದ ರಾಮನಗರ ವಿಧಾನಸಭೆ ಕ್ಷೇತ್ರದ ಮಹಾಜನತೆಗೆ ನನ್ನ ಶಿರಸಾಷ್ಟಾಂಗ ನಮನಗಳು. ಈ ಒಂದು ಸೋಲು ನಿಮ್ಮ ಸೇವೆ ಮಾಡಬೇಕು ಎನ್ನುವ ನನ್ನ ಅದಮ್ಯ ಸಂಕಲ್ಪಕ್ಕೆ ತಡೆ ಒಡ್ಡಲಾರದು. ನಾನೆಂದೂ ನಿಮ್ಮ ಜೊತೆಯಲ್ಲೇ ಇರುತ್ತೇನೆ. ನಿಮಗಾಗಿ ಜೀವಿಸುತ್ತೇನೆ.
ಸೋಲನ್ನು ಸಮಚಿತ್ತದಿಂದ ಸ್ವಿಕರಿಸಿ ಮುನ್ನಡೆಯುತ್ತೇನೆ. ಅದು ನಾನು ನನ್ನ ಪೂಜ್ಯ ತಾತನವರಾದ ಹೆಚ್.ಡಿ ದೇವೇಗೌಡ ಸಾಹೇಬರಿಂದ, ತಂದೆ ಹೆಚ್.ಡಿ ಕುಮಾರಸ್ವಾಮಿ ಅವರಿಂದ ಕಲಿತ ಪಾಠ. ಎಡವಿದ್ದೇನೆ, ಮತ್ತೆ ಎದ್ದು ಓಡುತ್ತೇನೆ. ಬಿದ್ದ ಮಗುವನ್ನು ಮೇಲೆತ್ತುವ ನಿಮ್ಮ ಪ್ರೀತಿ, ವಾತ್ಸಲ್ಯವನ್ನು ನಾನು ಬಲ್ಲೆ.
ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಜಾತ್ಯತೀತ ಜನತಾದಳವನ್ನ ಹರಸಿದ ಸಾರ್ವಜನಿಕ ಬಂಧುಗಳನ್ನು ಇಲ್ಲಿ ಸ್ಮರಿಸುತ್ತೇನೆ. ಸೋಲಿನಿಂದ ಕಂಗೆಟ್ಟು ಜನರಿಂದ ದೂರವಾಗುವ ಜಾಯಮಾನ ನಮ್ಮದಲ್ಲ. ಈ ಪರಾಜಯದಿಂದ ಪಾಠ ಕಲಿಯುತ್ತೇವೆ, ಪುನಾ ಪುಟಿದೆದ್ದು ಬರುತ್ತೇವೆ. ಪ್ರತಿಯೊಬ್ಬರಿಗೂ ಪ್ರಣಾಮಗಳು ಎಂದು ಬರೆದುಕೊಂಡಿದ್ದಾರೆ.