ತುಮಕೂರು: ಬೈಕ್ ಇಎಂಐ ಕಟ್ಟಲು ಹಣವಿಲ್ಲದೇ ಸರಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ.
ಬಂಧಿತ ಆರೋಪಿಗಳು ಸೂರ್ಯ ಹಾಗೂ ಸಂದೀಪ್ ಇತ್ತೀಚೆಗೆ ಸ್ಪೋರ್ಟ್ಸ್ ಬೈಕೊಂದನ್ನು ಖರೀದಿಸಿದ್ದರು. ಆದರೆ ಇಎಂಐ ಕಟ್ಟಲು ಹಣವಿಲ್ಲದೇ ಸರಗಳ್ಳತನಕ್ಕೆ ಮುಂದಾಗಿದ್ದರು. ಇದನ್ನೂ ಓದಿ: ಭಾರತಕ್ಕೆ ಗಟ್ಸ್ ಇಲ್ಲ ಅನ್ನೋರು ಮೊದಲು ಉಕ್ರೇನ್ ಗಡಿವರೆಗೆ ತಲುಪಿ ಧಮ್ ತೋರಿಸಬೇಕಿತ್ತು: ಸುಜಯ್
ಸರಗಳ್ಳತನವನ್ನು ಗಮನಿಸಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ 45 ಗ್ರಾಂ. ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಹುಳಿಯದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಆಪರೇಷನ್ ಗಂಗಾ ಯಶಸ್ಸಿಗೆ ಭಾರತದ ಜಾಗತಿಕ ಪ್ರಭಾವವೇ ಕಾರಣ: ಮೋದಿ