ಬೆಂಗಳೂರು: ದೇವನಹಳ್ಳಿಯಲ್ಲಿ ಭೂಸ್ವಾಧೀನಪಡಿಸಿಕೊಂಡ 120 ಎಕರೆ ಜಮೀನಿಗೆ ಪ್ರತಿ ಎಕರೆಗೆ 2.70 ಕೋಟಿ ರೂ. ಪರಿಹಾರ ನೀಡುವಂತೆ ಭೂದರ ನಿರ್ಧಾರಣಾ ಸಲಹಾ ಸಮಿತಿ ಕೆಐಎಡಿಬಿಗೆ (KIADB) ಶಿಫಾರಸು ಮಾಡಿದೆ.
ದೇವನಹಳ್ಳಿ (Devanahalli) ತಾಲೂಕು ಚನ್ನರಾಯಪಟ್ಟಣ ಹೋಬಳಿಯ ಗೋಕರೆಬಚ್ಚೇನಹಳ್ಳಿ ಮತ್ತು ಹ್ಯಾಡಾಳ ಗ್ರಾಮದಲ್ಲಿ ಕೈಗಾರಿಕಾ ಉದ್ದೇಶಕ್ಕೆ ರೈತರು ಸ್ವಯಂಪ್ರೇರಿತವಾಗಿ ಬಿಟ್ಟುಕೊಡಲು ಒಪ್ಪಿರುವ 120 ಎಕರೆ ಪ್ರತಿ ಎಕರೆಗೆ 2.70 ಕೋಟಿ ರೂ. ಪರಿಹಾರ ನೀಡುವಂತೆ ಭೂದರ ನಿರ್ಧಾರಣಾ ಸಲಹಾ ಸಮಿತಿ ಕೆಐಎಡಿಬಿಗೆ ಶಿಫಾರಸು ಮಾಡಿದೆ. ಇದನ್ನೂ ಓದಿ: ಕೊಲೆಗಾರ್ತಿ ಬರ್ತ್‌ಡೇ ಸೆಲಬ್ರೇಷನ್‌ಗೆ ಫೈವ್‌ಸ್ಟಾರ್ ಹೋಟೆಲ್‌ನಲ್ಲಿ 70 ರೂಮ್ ಬುಕ್ ಮಾಡಿದ್ದ ಕೇತನ್ ತಂದೆ
ಕೆಐಎಡಿಬಿ ವಿಶೇಷ ಜಿಲ್ಲಾಧಿಕಾರಿ ಎ.ಎನ್.ರಘುನಂದನ್ ಅಧ್ಯಕ್ಷತೆಯಲ್ಲಿ ಇಂದು (ಜೂ.24) ಅರವಿಂದ ಭವನದಲ್ಲಿ ನಡೆದ ಅಧಿಕಾರಿಗಳು ಹಾಗೂ ಭೂಮಾಲೀಕರ ಜಂಟಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ತೀರ್ಮಾನವನ್ನು ಕೆಐಎಡಿಬಿ ಮಂಡಳಿಯ ಅನುಮೋದನೆಗಾಗಿ ಕಳಿಸಿ ಕೊಡಲಾಗುವುದು. ಪರಿಹಾರವನ್ನು ಹಣದ ರೂಪದಲ್ಲಿ ತೆಗೆದುಕೊಳ್ಳಲು ಇಷ್ಟವಿಲ್ಲದಿದ್ದರೆ ಪ್ರತೀ ಎಕರೆ ಕೃಷಿ ಜಮೀನಿಗೆ ಅಭಿವೃದ್ಧಿಪಡಿಸಿದ ಕೈಗಾರಿಕಾ ಬಡಾವಣೆಯಲ್ಲಿ 10,781 ಚದರ ಅಡಿ ಜಾಗವನ್ನು ಪಡೆದುಕೊಳ್ಳುವುದಕ್ಕೂ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಜಮೀನುಗಳನ್ನು ರೈತರು ತಾವಾಗಿಯೇ ಬಿಟ್ಟುಕೊಡುತ್ತಿದ್ದು, ಈ ಸಂಬAಧ ಕೆಐಎಡಿಬಿ ಕಾಯ್ದೆಯನುಸಾರ ಇದೇ ತಿಂಗಳ 16ರಂದು ಅಂತಿಮ ಅಧಿಸೂಚನೆ ಹೊರಡಿಸಿ, ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿತ್ತು. ಈಗ ನಿಗದಿಪಡಿಸಿರುವ ಪರಿಹಾರ ದರವು ದೇವನಹಳ್ಳಿ ಭಾಗದಲ್ಲೇ ಅತ್ಯಂತ ಹೆಚ್ಚಿನದಾಗಿದೆ. ಸಂತ್ರಸ್ತ ರೈತರಿಗೆ ನ್ಯಾಯಯತ ಪರಿಹಾರ ಕೊಡಬೇಕೆಂಬುದು ಸರ್ಕಾರದ ಆಶಯವಾಗಿದೆ ಎಂದಿದ್ದಾರೆ.
ಕೆಐಎಡಿಬಿ ಭೂಸ್ವಾಧೀನಾಧಿಕಾರಿ ಸೂರಜ್ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.ಇದನ್ನೂ ಓದಿ: ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆ – ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಇರಾನ್ ಅಧ್ಯಕ್ಷ
