– ಪ್ರಜ್ವಲ್ ವಿರುದ್ಧ ಕ್ರಮ ತಗೆದುಕೊಳ್ಳಲು ನಮ್ಮ ತಕರಾರಿಲ್ಲ
– ಸಂತ್ರಸ್ತ ಹೆಣ್ಣುಮ್ಕಳಿಗೆ ನ್ಯಾಯ ಸಿಗಬೇಕು ಎಂದ ಮಾಜಿ ಪ್ರಧಾನಿ
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದ (Prajwal Revanna Case) ಬಗ್ಗೆ ಕೊನೆಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD Deve Gowda) ಅವರು ಮೌನ ಮುರಿದಿದ್ದಾರೆ.
ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಬೆಂಗಳೂರಿನ ಜೆಪಿ ನಗರ ಲಕ್ಷ್ಮಿ-ವೆಂಕಟೇಶ್ವರ ದೇವಸ್ಥಾನಕ್ಕೆ ಹೋಗಿ ಬಂದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಪ್ರಜ್ವಲ್ ರೇವಣ್ಣ ಮತ್ತು ರೇವಣ್ಣ ಅವರ ಪ್ರಕಣದಲ್ಲಿ ಏನೇನು ನಡೆಯುತ್ತಿದೆ ಅನ್ನೋದು ಗೊತ್ತಿದೆ. ಪ್ರಕರಣ ಕೋರ್ಟ್‌ನಲ್ಲಿ ಇರೋದ್ರಿಂದ ನಾನು ಅದರ ಬಗ್ಗೆ ಕಾಮೆಂಟ್ ಮಾಡಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್ ನಿವಾಸದ ಸಿಸಿಟಿವಿ ಟ್ಯಾಂಪರಿಂಗ್ ಮಾಡಲಾಗುತ್ತಿದೆ: ಸ್ವಾತಿ ಮಲಿವಾಲ್
ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ. ಈ ಪ್ರಕರಣದಲ್ಲಿ ಅನೇಕರು ಭಾಗಿಯಾಗಿದ್ದಾರೆ. ನಾನು ಯಾರ ಹೆಸರನ್ನೂ ಹೇಳಲ್ಲ. ಆದ್ರೆ ಯಾರೆಲ್ಲ ಭಾಗಿಯಾಗಿದ್ದಾರೆ ಅವರ ವಿರುದ್ಧ ಕ್ರಮ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ED ಜಾಹೀರಾತು ನೋಡುತ್ತಿದ್ದೇವೆ: ಬಾಂದ್ರಾ-ವರ್ಲಿ ಸೀ ಲಿಂಕ್ ಉದಾಹರಿಸಿ ರಶ್ಮಿಕಾಗೆ ಕೇರಳ ಕಾಂಗ್ರೆಸ್ ತಿರುಗೇಟು
ಅಲ್ಲದೇ ಈ ಪ್ರಕರಣದಲ್ಲಿ ಯಾರೆಲ್ಲಾ ಅಪಾಯಕ್ಕೆ ಸಿಲುಕಿದ್ದಾರೋ ಆ ಹೆಣ್ಣುಮಕ್ಕಳಿಗೆ ನ್ಯಾಯ ಸಿಗಬೇಕು, ಜನತೆಗೆ ನ್ಯಾಯ ಸಿಗಬೇಕು ಎಂದು ಕುಮಾರಸ್ವಾಮಿ (HD Kumaraswamy) ಬಿಡಿಸಿ ಬಿಡಿಸಿ ಹೇಳಿದ್ದಾರೆ. ಪ್ರಜ್ವಲ್ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ನಮಗೆ ಯಾವುದೇ ತಕರಾರು ಇಲ್ಲ. ಆದ್ರೆ ರೇವಣ್ಣ ಬಗ್ಗೆ ಮಾಡಿರೋ ಕೇಸ್ ಬಗ್ಗೆ ರಾಜ್ಯದ ಜನತೆ ನೋಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಸದ್ಯ ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ವಿರುದ್ಧ ದಾಖಲಾಗಿದ್ದ ಅಪಹರಣ ಪ್ರಕರಣದಲ್ಲಿ ಜಾಮೀನು ಮಂಜೂರಾಗಿದೆ. ಆದ್ರೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಧ್ಯಂತರ ಜಾಮೀನನ್ನು ಸೋಮವಾರದವರೆಗೆ ಕೋರ್ಟ್ ಕಾಯ್ದಿರಿಸಿದೆ.