ಬೆಂಗಳೂರು: ದೇವೇಗೌಡರ (HD Devegowda) ಪತ್ನಿ ಚೆನ್ನಮ್ಮ ಆರಾಮಾಗಿದ್ದಾರೆ, ತಕ್ಕಮಟ್ಟಿಗೆ ಸುಧಾರಿಸಿಕೊಂಡಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ (Manipal Hospital) ವೈದ್ಯ ಡಾ.ಸತ್ಯ ನಾರಾಯಣ ಮೈಸೂರು ತಿಳಿಸಿದ್ದಾರೆ.
ʻಪಬ್ಲಿಕ್ ಟಿವಿʼ ಜೊತೆ ಮಾತನಾಡಿದ ಅವರು, ಚೆನ್ನಮ್ಮ ಅವರು ಉಸಿರಾಟದ ತೊಂದರೆ, ಚೆಸ್ಟ್ ಕನ್ಜೆಕ್ಷನ್ ಅಂತ ಬಂದಿದ್ದರು. ಸದ್ಯ ಆರಾಮಾಗಿದ್ದಾರೆ. ತಕ್ಕ ಮಟ್ಟಿಗೆ ಸುಧಾರಿಸಿಕೊಂಡಿದ್ದಾರೆ. ಎರಡು ದಿನದಲ್ಲಿ ಡಿಸ್ಚಾರ್ಜ್ ಮಾಡೋ ಪ್ಲ್ಯಾನ್ ಇದೆ. ಸ್ವಲ್ಪ ಆಕ್ಸಿಜನ್ ಏರುಪೇರು ಇರೋದ್ರಿಂದ ಐಸಿಯುನಲ್ಲಿ ಅಡ್ಮಿಟ್ ಮಾಡಿದ್ದೇವೆ. ಅದರ ಹೊರತಾಗಿ ಯಾವುದೇ ಗಂಭೀರ ಪರಿಸ್ಥಿತಿ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪತ್ನಿ ಆರೋಗ್ಯದಲ್ಲಿ ದಿಢೀರ್ ಏರುಪೇರು – ಆಸ್ಪತ್ರೆಗೆ ದಾಖಲು

ಚೇತರಿಸಿಕೊಳ್ಳುವ ಎಲ್ಲಾ ಲಕ್ಷಣಗಳು ಇವೆ. ಡಾ.ಮಂಜುನಾಥ್, ದೇವೇಗೌಡರು ರಾತ್ರಿ ಬಂದಿದ್ದರು. ಹೆಚ್‌ಡಿ ಕುಮಾರಸ್ವಾಮಿ ಅವರು ನನ್ನ ಜೊತೆ ಮಾತಾಡಿದ್ದಾರೆ. ಉಸಿರಾಟದ ಸಮಸ್ಯೆ ಈಗ ಕಮ್ಮಿಯಾಗಿದೆ ಎಂದು ಹೇಳಿದ್ದಾರೆ.
ಬುಧವಾರ ರಾತ್ರಿ (ಜು.15) 10 ಗಂಟೆ ಬಳಿಕ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಚೆನ್ನಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು.ಇದನ್ನೂ ಓದಿ: ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ ಆರೋಪ – ಇನ್‌ಫ್ಲೂಯೆನ್ಸರ್ ಅಮುಕು ಡುಮುಕು ವಿರುದ್ಧ FIR
