– ಬೆಲೆ ನಿಗದಿ ಮಾಡಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ
ಬೆಂಗಳೂರು: ರಾಜ್ಯದಲ್ಲಿ ಕ್ಯಾನ್ಸರ್ ರೋಗಿಗಳಿಗೆ (Cancer Medicine) ಬಳಸುವ ದುಬಾರಿ ಔಷಧಿ ಹಾಗೂ ಇಂಜೆಕ್ಷನ್‌ಗಳ ದರ ನಿಗದಿಗೆ ಸೂಕ್ತ ಚೌಕಟ್ಟು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಆರೋಗ್ಯ ಸಚಿವ ಯು.ಟಿ. ಖಾದರ್ (U T Khadar) ಮನವಿ ಮಾಡಿದ್ದಾರೆ.
ಕ್ಯಾನ್ಸರ್ ಔಷಧಿಗಳಿಗೆ ಬೇಕಾಬಿಟ್ಟಿ ದರಗಳನ್ನು ವಿಧಿಸಲಾಗಿದೆ. ದುಬಾರಿ ದರ ನಿಗದಿಪಡಿಸಿ, ಆಮೇಲೆ ರಿಯಾಯಿತಿ ದರದಲ್ಲಿ ಔಷಧ ನೀಡಲಾಗುತ್ತಿದೆ. ಅತಿಯಾದ ದರ ವಸೂಲಿ ತಡೆಯಲು ಕೇಂದ್ರ ಸರ್ಕಾರ ತಕ್ಷಣವೇ ಬೆಲೆ ನಿಗದಿ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ರಾಜ್ಯ ಸರ್ಕಾರ ಮನವಿ ಮಾಡಿದೆ. ಇದನ್ನೂ ಓದಿ: ಕೆಪಿಎಸ್‌ಸಿ ಹಗರಣ – ಐಎಎಸ್ ಅಧಿಕಾರಿ ಗ್ಯಾನೇಂದ್ರ, ಬಸವರಾಜ್ ಕನ್ನಾಳೆಗೆ 14 ದಿನ ನ್ಯಾಯಾಂಗ ಬಂಧನ
ಔಷಧಿಗಳ ದರವನ್ನು ನಿಗದಿಪಡಿಸುವ ಅಧಿಕಾರ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ, ಪ್ರಸ್ತುತ ಖಾಸಗಿ ಆಸ್ಪತ್ರೆಗಳು ಪ್ರತ್ಯೇಕ ಬೆಲೆಗಳನ್ನು ನಿಗದಿಪಡಿಸಿ ರೋಗಿಗಳನ್ನು ಸುಲಿಗೆ ಮಾಡುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರೋಗಿಗಳು ತಮ್ಮ ಕೊನೆಯ ಹಂತದಲ್ಲಿದ್ದಾಗಲೂ ಆಸ್ಪತ್ರೆಗಳು ಅತ್ಯಂತ ದುಬಾರಿ ಇಂಜೆಕ್ಷನ್‌ಗಳನ್ನು ನೀಡಲು ಮುಂದಾಗುತ್ತವೆ. ಇಂತಹ ದುಬಾರಿ ಔಷಧಿಗಳನ್ನು ಖರೀದಿಸಲು ಅವರಿಗೆ ಸಾಧ್ಯವಾಗುವುದಿಲ್ಲ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಬೆಲೆ ನಿಗದಿ ಮತ್ತು ನಿರ್ದಿಷ್ಟ ಮಾರ್ಗದರ್ಶಿ ಸೂತ್ರಗಳನ್ನು ರಚಿಸುವುದು ಅತ್ಯಗತ್ಯವಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.ಇದನ್ನೂ ಓದಿ: ಸುರಕ್ಷತಾ ನಿಯಮ ಉಲ್ಲಂಘನೆ; ಕೋಲ್ಕತ್ತಾದಲ್ಲಿ 919 ಹೋಟೆಲ್, ಗೆಸ್ಟ್‌ಹೌಸ್‌ಗಳು ತಾತ್ಕಾಲಿಕ್ ಬಂದ್
