ತುಮಕೂರು: ಹೆಚ್ಚು ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿ ಮಾಡುವ ಮೂಲಕ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ (V Somanna) ತಿಳಿಸಿದರು.
ಗುಬ್ಬಿ (Gubbi) ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ 73ರ ಕಾಮಗಾರಿ ವೀಕ್ಷಣೆ ಹಾಗೂ ಪಟ್ಟಣದ ರೈಲ್ವೆ ನಿಲ್ದಾಣದ ಲಘು ಮೇಲ್ಸೇತುವೆ ನಿರ್ಮಾಣದ ಬಗ್ಗೆ ಮಾಹಿತಿ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಇದನ್ನೂ ಓದಿ: ವರ್ಷಕ್ಕೊಮ್ಮೆ ದರ್ಶನ ನೀಡುವ ಕಾಫಿನಾಡ ʻಬಿಂಡಿಗ ದೇವೀರಮ್ಮʼ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ!
Advertisement
ರಾಜಕೀಯಕ್ಕಿಂತ ಅಭಿವೃದ್ಧಿ ಮುಖ್ಯ. ಪಟ್ಟಣದ ಜನರ ಬಹು ಬೇಡಿಕೆಯಾಗಿದ್ದ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಹೇಳಿದರು. ಅಲ್ಲದೇ ರೈಲ್ವೆ ಅಧಿಕಾರಿಗಳಿಗೆ ಕರೆ ಮಾಡಿ ಪ್ರಸ್ತುತ ಯೋಜನೆಗೆ ಬದಲಾಗಿ ಮೇಲ್ಸೇತುವೆ ರಸ್ತೆಯನ್ನು 25 ಅಡಿಗಳಿಗೆ ವಿಸ್ತರಿಸುವಂತೆ ದೂರವಾಣಿ ಮೂಲಕ ನಿರ್ದೇಶನ ನೀಡಿದರು. ಇದನ್ನೂ ಓದಿ: 2026ರ ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಗೆಲ್ತೀವಿ – ದಳಪತಿ ವಿಜಯ್ ʻವಿಕ್ಟರಿʼ ಮಾತು
Advertisement
Advertisement
ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ 73ರ ಕಾಮಗಾರಿಗೆ ಅಡೆತಡೆಯಾಗಿದ್ದ ಕೆಲವು ಸಮಸ್ಯೆಗಳನ್ನು ಬಗೆಹರಿಸಿರುವುದರಿಂದ ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡಲಾಗುವುದು ಎಂದರು. ಇದನ್ನೂ ಓದಿ: ಎಷ್ಟಾದ್ರೂ ಹಣ ಸುರಿದು ಚುನಾವಣೆ ಮಾಡೋದು ಹೆಚ್‌ಡಿಕೆ ಬಳಿ ಇರೋ ಅಸ್ತ್ರ: ಸಿಪಿವೈ
Advertisement