ಬೀದರ್: ಕ್ಷೇತ್ರದ ಅಭಿವೃದ್ಧಿಗಾಗಿ ರಸ್ತೆ, ಒಳಚರಂಡಿ, ವಿದ್ಯುತ್, ಕುಡಿಯುವ ನೀರು, ಶಿಕ್ಷಣ ಸೇರಿದಂತೆ ಇತರೆ ಮೂಲಸೌಕರ್ಯಗಳನ್ನು ಒದಗಿಸುವುದು ನನ್ನ ಕರ್ತವ್ಯ ಈ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ಬೀದರ್ (Bidar) ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ (Shailendra Beldale) ಅವರು ಹೇಳಿದರು.
ಬೀದರ್ ದಕ್ಷಿಣ ಕ್ಷೇತ್ರದ ನಿರ್ಣಾ ಗ್ರಾಮದಲ್ಲಿ 30 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ನಿರ್ಮಾಣ ಮತ್ತು ಶ್ರೀ ಗುತ್ತಿ ಬಸವೇಶ್ವರ ದೇವಸ್ಥಾನದ ಬಳಿ 25 ಲಕ್ಷ ರೂ. ವೆಚ್ಚದ ಸಮುದಾಯ ನೈರ್ಮಲ್ಯ ಸಂಕೀರ್ಣ ಘಟಕ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.ಇದನ್ನೂ ಓದಿ: ಇಂಡಿಯಾ ಒಕ್ಕೂಟದಲ್ಲಿ ಬಿರುಕು – ನಾಯಕತ್ವ ಬದಲಾವಣೆಗೆ ಆಂತರಿಕ ಕಲಹ
ಚಾಲನೆ ನೀಡಿ ಮಾತನಾಡಿದ ಅವರು, ಬೀದರ್ ದಕ್ಷಿಣ ಕ್ಷೇತ್ರದ ಪರಿಪೂರ್ಣ ಅಭಿವೃದ್ಧಿಯೇ ನನ್ನ ಗುರಿಯಾಗಿದೆ. ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಜನರ ಕಣ್ಣಲ್ಲಿ ಸಂತೋಷ ಮತ್ತು ಸಂತೃಪ್ತಿ ಕಾಣಬೇಕೆನ್ನುವುದೇ ನನ್ನ ಗುರಿಯಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಜಾರಿಗೆ ಬರುವ ಯೋಜನೆಗಳನ್ನು ಕ್ಷೇತ್ರಕ್ಕೆ ತರುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಮಾಡುತ್ತಿದ್ದೇನೆ ಎಂದು ಹೇಳಿದರು.
ನನ್ನ ಬಳಿ ಬರುವ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ. ನಾನೇ ಖುದ್ದಾಗಿ ಜನರ ಬಳಿ ಹೋಗಿ ಕಾನೂನಿನ ಚೌಕಟ್ಟಿನಲ್ಲಿ ಯಾವ ಕೆಲಸ ಆಗಬೇಕಾಗಿದೆಯೋ ಅವುಗಳನ್ನು ಮಾಡುತ್ತಿದ್ದೇನೆ. ಇಲ್ಲಿಯವರೆಗೆ ಮಾಡಿದಂತಹ ಅಭಿವೃದ್ಧಿ ಕೆಲಸದ ವರದಿಯನ್ನು ತರಿಸಿಕೊಂಡು ಪರಿಶೀಲಿಸಲಾಗುತ್ತಿದೆ. ಕಾಮಗಾರಿಗಳನ್ನು ಉತ್ತಮವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.ಇದನ್ನೂ ಓದಿ: Pink Ball Test | ಭಾರತಕ್ಕೆ ಮತ್ತೆ ಟ್ರಾವಿಸ್ ʻಹೆಡ್ಡೇಕ್ʼ – ಆಸೀಸ್‌ಗೆ 29 ರನ್‌ಗಳ ಮುನ್ನಡೆ